ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121 ಕ್ಕೆ ಏರಿದೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ ಬುಧವಾರ ತಿಳಿಸಿದೆ.
ಉತ್ತರ ಪ್ರದೇಶ ಪೊಲೀಸರು ಮೈನ್‌ಪುರಿ ಜಿಲ್ಲೆಯ ರಾಮ್ ಕುಟಿರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿ ತಲೆಮರೆಸಿಕೊಂಡಿರುವ ಭೋಲೆ ಬಾಬಾ ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಿದ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ಅವರು “ಕ್ಯಾಂಪಸ್‌ನಲ್ಲಿ ಬಾಬಾ ಅವರು ಪತ್ತೆಯಾಗಿಲ್ಲ” ಎಂದು ಬಹಿರಂಗಪಡಿಸಿದರು.
‘ಮುಖ್ಯ ಸೇವಾದಾರ್’ ಎಂದು ಕರೆಯಲ್ಪಡುವ ದೇವಪ್ರಕಾಶ್ ಮಧುಕರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023ರ ಸೆಕ್ಷನ್ 105, 110, 126 (2), 223 ಮತ್ತು 238 ರ ಅಡಿಯಲ್ಲಿ ಕಾಲ್ತುಳಿತ ಸಂಭವಿಸಿದ ಧಾರ್ಮಿಕ ಕಾರ್ಯಕ್ರಮದ ಇತರ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಇಂದು ಘಟನಾ ಸ್ಥಳಕ್ಕೆ ಸಿಎಂ ಭೇಟಿ
ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ. ಧಾರ್ಮಿಕ ಸಭೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 121 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ಬೆಳಗ್ಗೆ 11 ಗಂಟೆ ಸುಮಾರಿಗೆ ಹತ್ರಾಸ್ ತಲುಪುವ ನಿರೀಕ್ಷೆಯಿದೆ. ಇದು “ಅಪಘಾತವೋ ಅಥವಾ ಪಿತೂರಿ” ಎಂದು ನಿರ್ಧರಿಸಲು ಅವರು ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ.
ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ದೃಢಪಡಿಸಿದರು. ಇಂತಹ ಘಟನೆಗೆ ಸಂತಾಪ ಸೂಚಿಸುವ ಬದಲು ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಹಾಗೂ ಖಂಡನೀಯ, ಈ ವಿಚಾರದಲ್ಲಿ ಸರ್ಕಾರ ಈಗಾಗಲೇ ಸೂಕ್ಷ್ಮವಾಗಿ ವರ್ತಿಸಿದ್ದು, ಇದು ಅಪಘಾತವೇ ಅಥವಾ ಷಡ್ಯಂತ್ರವೇ ಎಂಬ ವಿಚಾರವನ್ನು ಸರ್ಕಾರ ಬೇಧಿಸಿ ಸೂಕ್ತ ಶಿಕ್ಷೆ ನೀಡಲಿದೆ. ಈ ಘಟನೆಗೆ ಎಲ್ಲರೂ ಕಾರಣರಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಘಟನಾ ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮನ
ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನ ದಳ ಘಟನಾ ಸ್ಥಳಕ್ಕೆ ತಲುಪಿದೆ. ಫೋರೆನ್ಸಿಕ್ ತಂಡವು ತನಿಖೆಗೆ ಸಹಾಯ ಮಾಡಲು ಸ್ಥಳದಿಂದ ಎಲ್ಲ ಸಂಬಂಧಿತ ಸಾಕ್ಷ್ಯಗಳನ್ನು ಸಂಗ್ರಹಿಸಲು ಸಜ್ಜಾಗಿದೆ. ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ತಂಡವೂ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ವರದಿಯನ್ನು 24 ಗಂಟೆಗಳ ಒಳಗೆ ಸಲ್ಲಿಸಬೇಕು ಎಂದು ಯುಪಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ; ಉತ್ತರ ಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನರು ಸಾವು


