Homeಮುಖಪುಟಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ, ತಲೆಮರೆಸಿಕೊಂಡ ಭೋಲೆ ಬಾಬಾ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ, ತಲೆಮರೆಸಿಕೊಂಡ ಭೋಲೆ ಬಾಬಾ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121 ಕ್ಕೆ ಏರಿದೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ ಬುಧವಾರ ತಿಳಿಸಿದೆ.

ಉತ್ತರ ಪ್ರದೇಶ ಪೊಲೀಸರು ಮೈನ್‌ಪುರಿ ಜಿಲ್ಲೆಯ ರಾಮ್ ಕುಟಿರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿ ತಲೆಮರೆಸಿಕೊಂಡಿರುವ ಭೋಲೆ ಬಾಬಾ ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಿದ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ಅವರು “ಕ್ಯಾಂಪಸ್‌ನಲ್ಲಿ ಬಾಬಾ ಅವರು ಪತ್ತೆಯಾಗಿಲ್ಲ” ಎಂದು ಬಹಿರಂಗಪಡಿಸಿದರು.

‘ಮುಖ್ಯ ಸೇವಾದಾರ್’ ಎಂದು ಕರೆಯಲ್ಪಡುವ ದೇವಪ್ರಕಾಶ್ ಮಧುಕರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌), 2023ರ ಸೆಕ್ಷನ್ 105, 110, 126 (2), 223 ಮತ್ತು 238 ರ ಅಡಿಯಲ್ಲಿ ಕಾಲ್ತುಳಿತ ಸಂಭವಿಸಿದ ಧಾರ್ಮಿಕ ಕಾರ್ಯಕ್ರಮದ ಇತರ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇಂದು ಘಟನಾ ಸ್ಥಳಕ್ಕೆ ಸಿಎಂ ಭೇಟಿ

ಇಂದು ಘಟನಾ ಸ್ಥಳಕ್ಕೆ ಭೇಟಿ  ನೀಡಲಿರುವ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ. ಧಾರ್ಮಿಕ ಸಭೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 121 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ಬೆಳಗ್ಗೆ 11 ಗಂಟೆ ಸುಮಾರಿಗೆ ಹತ್ರಾಸ್ ತಲುಪುವ ನಿರೀಕ್ಷೆಯಿದೆ. ಇದು “ಅಪಘಾತವೋ ಅಥವಾ ಪಿತೂರಿ” ಎಂದು ನಿರ್ಧರಿಸಲು ಅವರು ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ.

ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ದೃಢಪಡಿಸಿದರು. ಇಂತಹ ಘಟನೆಗೆ ಸಂತಾಪ ಸೂಚಿಸುವ ಬದಲು ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಹಾಗೂ ಖಂಡನೀಯ, ಈ ವಿಚಾರದಲ್ಲಿ ಸರ್ಕಾರ ಈಗಾಗಲೇ ಸೂಕ್ಷ್ಮವಾಗಿ ವರ್ತಿಸಿದ್ದು, ಇದು ಅಪಘಾತವೇ ಅಥವಾ ಷಡ್ಯಂತ್ರವೇ ಎಂಬ ವಿಚಾರವನ್ನು ಸರ್ಕಾರ ಬೇಧಿಸಿ ಸೂಕ್ತ ಶಿಕ್ಷೆ ನೀಡಲಿದೆ. ಈ ಘಟನೆಗೆ ಎಲ್ಲರೂ ಕಾರಣರಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಘಟನಾ ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮನ

ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನ ದಳ ಘಟನಾ ಸ್ಥಳಕ್ಕೆ ತಲುಪಿದೆ. ಫೋರೆನ್ಸಿಕ್ ತಂಡವು ತನಿಖೆಗೆ ಸಹಾಯ ಮಾಡಲು ಸ್ಥಳದಿಂದ ಎಲ್ಲ ಸಂಬಂಧಿತ ಸಾಕ್ಷ್ಯಗಳನ್ನು ಸಂಗ್ರಹಿಸಲು ಸಜ್ಜಾಗಿದೆ. ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ತಂಡವೂ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ವರದಿಯನ್ನು 24 ಗಂಟೆಗಳ ಒಳಗೆ ಸಲ್ಲಿಸಬೇಕು ಎಂದು ಯುಪಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಉತ್ತರ ಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...