Homeಮುಖಪುಟ121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಆಯೋಜಿಸಿದ್ದ ಸತ್ಸಂಗ ಪ್ರಾರ್ಥನಾ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಅಲಿಯಾಸ್ ಭೋಲೆ ಬಾಬಾಗೆ ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಪ್ರಕರಣದ ತನಿಖೆಗೆ ನೇಮಿಸಿದ್ದ ಆಯೋಗವು ತನ್ನ ತನಿಖೆಯನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಗುರುವಾರ (ಫೆ.20) ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಾಂಗ ಆಯೋಗದ ವರದಿಯನ್ನು ಅನುಮೋದಿಸಲಾಗಿದೆ. ವರದಿಯನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರ ಮಂಡಿಸುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ನ್ಯಾಯಾಂಗ ಆಯೋಗವು ಸೂರಜ್ ಪಾಲ್ ಅಲಿಯಾಸ್ ಬೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದೆ. ಆದರೆ, ಘಟನೆಯ ಹಿಂದಿನ ಸಂಭಾವ್ಯ ಪಿತೂರಿಯ ಬಗ್ಗೆ ಇನ್ನೂ ಅನಿಶ್ಚಿತತೆ ಉಳಿದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆದೇಶ ಮೇರೆಗೆ ಜುಲೈ 3, 2024 ರಂದು ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ಕಾಲ್ತುಳಿತ ಘಟನೆಯ ತನಿಖೆಗಾಗಿ ರಚಿಸಲಾಗಿತ್ತು.

ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ನೇತೃತ್ವದ ಸಮಿತಿಯಲ್ಲಿ ಮಾಜಿ ಐಎಎಸ್ ಅಧಿಕಾರಿ ಹೇಮಂತ್ ರಾವ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭವೇಶ್ ಕುಮಾರ್ ಸಿಂಗ್ ಇದ್ದರು. ತನಿಖೆಗೆ ಆರಂಭದಲ್ಲಿ ಎರಡು ತಿಂಗಳುಗಳ ಕಾಲಾವಕಾಶ ನೀಡಲಾಗಿತ್ತು, ಆದರೆ ನಂತರ ಗಡುವನ್ನು ವಿಸ್ತರಿಸಲಾಗಿತ್ತು.

ಜಿಲ್ಲಾಡಳಿತ ಸತ್ಸಂಗ ಕಾರ್ಯಕ್ರಮಕ್ಕೆ ಅನುಮತಿ ನೀಡುವ ವೇಳೆ ವಿಧಿಸಿದ್ದ ಷರತ್ತುಗಳನ್ನು
ಆಯೋಜಕರು ಪಾಲಿಸಿದ್ದಾರೆಯೇ, ಅಧಿಕಾರಿಗಳು ತೆಗೆದುಕೊಂಡ ಜನಸಂದಣಿ ನಿರ್ವಹಣಾ ಕ್ರಮಗಳು ಮತ್ತು ದುರಂತದ ಹಿಂದಿನ ಯೋಜಿತ ಪಿತೂರಿಯ ಸಾಧ್ಯತೆಯ ಮೇಲೆ ಕೇಂದ್ರೀಕರಿಸಿ ನ್ಯಾಯಾಂಗ ಆಯೋಗ ತನಿಖೆ ನಡೆಸಿದೆ.

ಆಯೋಗದ ವರದಿಯು ಕಾಲ್ತುಳಿತ ದುರಂತದ ಕಾರಣಗಳು, ದುರಂತ ನಡೆದ ಸಂದರ್ಭ, ಆಗ ಅಧಿಕಾರಿಗಳು, ಕಾರ್ಯಕ್ರಮ ಆಯೋಜಕರು ವಹಿಸಿದ್ದ ಪಾತ್ರ ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಶಿಫಾಸ್ಸುಗಳನ್ನು ಒಳಗೊಂಡಿದೆ ಎಂದು Jagran.com ವರದಿ ತಿಳಿಸಿದೆ.

ಆಯೋಗವು ಕಳೆದ ಜುಲೈ 5 ರಂದು ಹತ್ರಾಸ್‌ನಲ್ಲಿ ಸ್ಥಳದಲ್ಲೇ ಪರಿಶೀಲನೆ ನಡೆಸಿ, ಎರಡು ದಿನಗಳ ಕಾಲ ವಾಸ್ತವ್ಯ ಹೂಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಪ್ರತ್ಯಕ್ಷದರ್ಶಿಗಳು, ಸಂತ್ರಸ್ತರ ಕುಟುಂಬಸ್ಥರು ಮತ್ತು ಅಕ್ಟೋಬರ್ 10, 2024 ರಂದು ಭಾಷಣ ಮಾಡಿದ್ದ ಸೂರಜ್ ಪಾಲ್ ಅವರಂತಹ ಪ್ರಮುಖ ವ್ಯಕ್ತಿಗಳು ಸೇರಿದಂತೆ 1,500 ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿದೆ.

ಸತ್ಸಂಗ ಕಾರ್ಯಕ್ರಮದಲ್ಲಿ ಜುಲೈ 2, 2024ರಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ ಹೆಚ್ಚಿನವರು ಮಹಿಳೆಯರು ಸೇರಿದಂತೆ 121 ಜನರು ಸಾವನ್ನಪ್ಪಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...