PC: Zee News

ಕೊರೊನಾ ಸಾಂಕ್ರಾಮಿಕ ರೋಗ ಎಲ್ಲೆಡೆ ತನ್ನ ವ್ಯಾಪ್ತಿ ವಿಸ್ತರಿಸುತ್ತಲೇ ಇದೆ. ಜನಪ್ರತಿನಿಧಿಗಳು ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಿಳಿ ಹೇಳಬೇಕಾದ ಶಾಸಕರೇ ಅವಘಡ ಮಾಡಿಕೊಂಡಿದ್ದಾರೆ. ಆಪ್ ಶಾಸಕ ಕುಲದೀಪ್ ಕುಮಾರ್ ಕೊರೊನಾ ಪಾಸಿಟಿವ್ ಇದ್ದರೂ ಹತ್ರಾಸ್ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ್ದಾರೆ.

ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳು ಕೊರೊನಾ ಮುನ್ನೆಚ್ಚರಿಕೆಗಳೊಂದಿಗೆ ಹತ್ರಾಸ್‌ಗೆ ತೆರಳುತ್ತಿವೆ.

ಆದರೆ ಆಮ್ ಆದ್ಮಿ ಪಕ್ಷದ ಶಾಸಕ ಕುಲದೀಪ್ ಕುಮಾರ್ ಕೊರೊನಾ ಪಾಸಿಟಿವ್ ಬಂದ ಮೇಲೆ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕರ ವಿರುದ್ಧ ಚಂದ್ಪಾ ಪೊಲೀಸ್ ಠಾಣೆಯಲ್ಲಿ 1897 ರ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕೊಂಡ್ಲಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ಶಾಸಕ ಕುಲದೀಪ್ ಕುಮಾರ್‌ ಟ್ವಿಟ್ಟರ್ ಖಾತೆಯ ಪ್ರಕಾರ, ಅವರು ಸೆಪ್ಟೆಂಬರ್ 29 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅದನ್ನು ಖುದ್ದು ಅವರೇ ಟ್ವೀಟ್ ಮಾಡಿದ್ದಾರೆ. ಆದರೆ ಅಕ್ಟೋಬರ್ 4 ರಂದು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕರು 14 ದಿನಗಳ ಕ್ವಾರಂಟೈನ್‌ನಲ್ಲಿ ಪ್ರತ್ಯೇಕವಾಗಿ ಇರಬೇಕಾಗಿತ್ತು. ಆದರೆ ಅವರು ನಿಯಮ ಉಲ್ಲಂಘಿಸಿದ್ದಾರೆ ಮತ್ತು ಅವರಿಗೆ ನೋಟಿಸ್ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಶಾಸಕ ಅಕ್ಟೋಬರ್‌ 4ರಂದು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಅಕ್ಟೋಬರ್‌ 5 ರಂದು ಸಂತ್ರಸ್ತ ಕುಟುಂಬದೊಂದಿಗಿನ ವಿಡಿಯೋ ಶೇರ್ ಮಾಡಿದ್ದರು.

 

ಸಂತ್ರಸ್ತ ಕುಟುಂಬದ ಭೇಟಿಗೆ ಹೋಗಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ  ಮತ್ತು 200 ಕಾರ್ಯಕರ್ತರ ಮೇಲೆ ಕೊರೊನಾ ನಿಯಮ ಉಲ್ಲಂಘನೆ ಎಂದು ಎಫ್‌ಐಆರ್ ದಾಖಲಿಸಲಾಗಿತ್ತು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್, 400 ಮಂದಿ ಕಾರ್ಯಕರ್ತರ ವಿರುದ್ಧ ಪ್ರಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ FIR ದಾಖಲಿಸಲಾಗಿದೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here