Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ವಿಪರ್ಯಾಸವೆಂದರೆ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದ ಠಾಕೂರ್ ಯುವಕರ ವಿರುದ್ಧವಾಗಲಿ, ಸಂತ್ರಸ್ತ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದ ಠಾಕೂರರ ವಿರುದ್ಧವಾಗಲಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ.

- Advertisement -
- Advertisement -

ನಿನ್ನೆ ಹತ್ರಾಸ್‌ನಲ್ಲಿ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ವಿರುದ್ಧ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ FIR ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಪೊಲೀಸರು ಅನುಮತಿ ನಿರಾಕರಿಸಿದ್ದ ಕಾರಣ ಚಂದ್ರಶೇಖರ್ ಆಜಾದ್ ಭಾನುವಾರ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಬೂಲ್‌ಗರಿ ಗ್ರಾಮಕ್ಕೆ ರ್‍ಯಾಲಿ ನಡೆಸಿದ್ದರು.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜೊತೆಗೆ ಇನ್ನೂ 400 ಮಂದಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಪರ್ಯಾಸವೆಂದರೆ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದ ಠಾಕೂರ್ ಯುವಕರ ವಿರುದ್ಧವಾಗಲಿ, ಸಂತ್ರಸ್ತ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದ ಠಾಕೂರರ ವಿರುದ್ಧವಾಗಲಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ.

ಸಂತ್ರಸ್ತ ಕುಟುಂಬದ ವಿರುದ್ಧ ಠಾಕೂರರ ಪ್ರತಿಭಟನೆ.

Some people from Thakur Caste rallying in favor of rape accused in Hathras Yogi Adityanath himself is from Thakur Caste. Is that the reason the police is doing everything possible to bury all evidence of rape?

Posted by Dhruv Rathee on Sunday, October 4, 2020

ಅಲಿಗಡ್-ಹತ್ರಾಸ್ ಮಾರ್ಗದಲ್ಲಿ ಚಂದ್ರಶೇಖರ್ ಆಜಾದ್ ಮತ್ತು ಅವರ ಬೆಂಗಾವಲು ಪಡೆಯನ್ನು ಬೂಲ್‌ಗರಿಯಿಂದ 20 ಕಿ.ಮೀ ದೂರದಲ್ಲಿ ಪೊಲೀಸರು ನಿಲ್ಲಿಸಲಾಯಿತು. ಹೀಗಾಗಿ ಆಜಾದ್ ತಮ್ಮ ಅನುಯಾಯಿಗಳೊಂದಿಗೆ ಗ್ರಾಮಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದರು.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಚಂದ್ರಶೇಖರ್ ಅಜಾದ್‌ರನ್ನು ಪೊಲೀಸರು ಹತ್ರಾಸ್‌ಗೆ ಹೋಗದಂತೆ ಆರಂಭದಲ್ಲಿ ತಡೆದರು. ನಂತರ ಪಟ್ಟು ಬಿಡದ ಆಜಾದ್‌ರವರಿಗೆ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅನುಮತಿ ನೀಡಿದರು.

ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಕೊನೆಗೂ ಭೇಟಿಯಾದ ಆಜಾದ್ “ಮೇಲ್ಜಾತಿ ಠಾಕೂರರು ಸಭೆ ನಡೆಸಿ ಸಂತ್ರಸ್ತ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಇಂತಹ ಸಮಯದಲ್ಲಿ ಕುಟುಂಬಕ್ಕೆ ರಕ್ಷಣೆ ಬೇಕು. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ವೈ ಪ್ಲಸ್ ಭದ್ರತೆ ಒದಗಿಸಬೇಕೆಂದು” ಆಗ್ರಹಿಸಿದ್ದರು. ಸರ್ಕಾರ ಭದ್ರತೆ ನೀಡದಿದ್ದರೆ ಸಂತ್ರಸ್ತರನ್ನು ತನ್ನ ಮನೆಗೆ ಕೊರೆದೊಯ್ದು ರಕ್ಷಣೆ ನೀಡುವುದಾಗಿ ಅವರು ಹೇಳಿದ್ದರು.

ಈ ನಡುವೆ ಸಂತ್ರಸ್ತೆಯ ಗ್ರಾಮಕ್ಕೆ ಭೇಟಿ ನೀಡಿದ್ದ ಚಂದ್ರಶೇಖರ್ ಆಜಾದ್‌ಗೆ ‘ಸವರ್ಣ ಜಾಗೋ’ ಹೆಸರಿನಲ್ಲಿ ಆರೋಪಿಗಳ ಪರ ಪ್ರತಿಭಟನೆ ನಡೆಸುತ್ತಿರುವ ಠಾಕೂರ್ ಯುವಕರಿಬ್ಬರು ಪೊಲೀಸರ ಸಮ್ಮುಖದಲ್ಲಿ ಬಹಿರಂಗ ಬೆದರಿಕೆ ಹಾಕಿದ್ದರು.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...