Homeಮುಖಪುಟಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

- Advertisement -
- Advertisement -

ಹತ್ರಾಸ್‌‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ, ಕೊಲೆ ಹಾಗೂ ನಂತರ ಯುವತಿಯ ಮೃತದೇಹವನ್ನು ಕುಟುಂಬವರಿಗೆ ನೀಡದೇ ತಾವೇ ರಾತ್ರೋರಾತ್ರಿ ಸುಟ್ಟು ಹಾಕಿದ್ದು ದೇಶದಾದ್ಯಂತ ಹಲವು ಅನುಮಾನ ಹಾಗೂ ತೀವ್ರ ಆಕ್ರೋಶಗಳಿಗೆ ಕಾರಣವಾಗಿದೆ. ಇಂತಹ ಸಮಯದಲ್ಲೇ ಹತ್ರಾಸ್ ಡಿಎಂ (ಜಿಲ್ಲಾಧಿಕಾರಿ) ಯುವತಿಯ ತಂದೆಯ ಬಳಿ ಹೋಗಿ ಹೇಳಿಕೆಯನ್ನು ಬದಲಾಯಿಸುವಂತೆ ಧಮಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

“ತಾನು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದು, ನನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅವರ ಆಶ್ವಾಸನೆಯಿಂದ ನಾನು ತೃಪ್ತನಾಗಿದ್ದೇನೆ. ಜನರು ಯಾವುದೇ ರೀತಿಯ ಪ್ರತಿಭಟನೆ ಮಾಡಬೇಡಿ ಎಂದು ಮನವಿ ಮಾಡುತ್ತೇನೆ” ಎಂದು ಯುವತಿಯ ತಂದೆ ಹೇಳಿದ್ದಾಗಿ ಮಾಧ್ಯಮಗಳು ಹೇಳಿತ್ತು. ಜೊತೆಗೆ ಅವರು ಸಹಿ ಮಾಡಿದ ಪತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಯುವತಿಯ ತಂದೆಯ ಹೇಳಿಕೆ ಎನ್ನಲಾದ ಪತ್ರ

ಆದರೆ ಹಲವಾರು ಜನರು, ಇದು ಯುವತಿಯ ತಂದೆಯನ್ನು ಬೆದರಿಸಿ ಕೊಡಿಸಿರುವ ಹೇಳಿಕೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಜಿಲ್ಲಾಧಿಕಾರಿ ಬೆದರಿಸುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಜಿಲ್ಲಾಧಿಕಾರಿಯೂ ಯುವತಿಯ ತಂದೆಯೊಂದಿಗೆ, “2-3 ದಿನಗಳಲ್ಲಿ ಮಾಧ್ಯಮಗಳು ಹೊರಡುತ್ತವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಹೇಳಿಕೆಯನ್ನು ಬದಲಾಯಿಸಲು ನೀವು ಬಯಸುತ್ತೀರಾ ಎಂಬುದು ನಿಮಗೆ ಬಿಟ್ಟದ್ದು” ಎಂದು ಒತ್ತಾಯಿಸುವುದನ್ನು ಕೇಳಬಹುದಾಗಿದೆ.

Watch- District Magistrate of Hathras(an employee of UP CM Adityanath) caught on camera telling the family,'Media will…

Posted by Saahil Murli Menghani on Thursday, October 1, 2020

ಇದನ್ನು ಆಮ್ ಆದ್ಮಿ ಪಕ್ಷ ತನ್ನ ಟ್ವಿಟ್ಟರ್‌ನಲ್ಲಿ ಹಾಕಿ, “ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಂದೆಯ ಮೇಲೆ ಒತ್ತಡ ಹೇರಲು ಆದಿತ್ಯನಾಥ್ ಸರ್ಕಾರದ ಹತ್ರಾಸ್‌ನ ಡಿಎಂ ಬೆದರಿಕೆ ಹಾಕುತ್ತಿದ್ದಾರೆ” ಎಂದು ಬರೆದಿದೆ.

ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ “ಸಂತ್ರಸ್ತೆಯ ಹಳ್ಳಿಗೆ ಹೋಗುವುದನ್ನು ಯುಪಿ ಸರ್ಕಾರ ಏಕೆ ತಡೆಯುತ್ತಿದೆ? ಹತ್ರಾಸ್ ಡಿಎಂ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾನೆ. ಅಲ್ಲಿಗೆ ಮಾಧ್ಯಮಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಜೊತೆಗೆ ಯುಪಿ ಸರ್ಕಾರವು ಸಂತ್ರಸ್ತೆಯ ಕುಟುಂಬಕ್ಕೆ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಜನರು ದಬ್ಬಾಳಿಕೆಯವರು.” ಎಂದು ಕಿಡಿಕಾರಿದ್ದಾರೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು. ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿ ಅತ್ಯಂತ ಗಂಭೀರ ಸ್ಥಿತಿಯಲ್ಲಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ವಿಡಿಯೋ ನೋಡಿ: ರಾಮನ ಭಕ್ತರು ಇಂದು ಹತ್ರಾಸ್‌ನ ದಲಿತ ಯುವತಿಯ ನಾಲಿಗೆ ಕತ್ತರಿಸಿದರು. ನಿಜವಾಗಿಯೂ ರಾಮರಾಜ್ಯ ಬಂದರೆ ಹೇಗಿರುತ್ತದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...