Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...