Homeಮುಖಪುಟ'ತಕ್ಷಣ ಮಕ್ಕಳನ್ನು ಹೊಂದಿ' | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್...

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

“ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಕ್ಷೇತ್ರ ವಿಂಗಡಣೆಯಿಂದಾಗಿ ಅಂತಹ ಸಲಹೆಯು ನೀಡುವುದಿಲ್ಲ.” ಎಂದು ತಮ್ಮ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತನ ಮಗನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.

ಇದೇ ವೇಳೆ ನಿವಾಸಿಗಳು ತಮ್ಮ ಮಕ್ಕಳಿಗೆ “ಸುಂದರವಾದ ತಮಿಳು ಹೆಸರುಗಳನ್ನು” ನೀಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಪುನರ್ರಚಿಸುವ ಪ್ರಕ್ರಿಯೆಯೇ ಕ್ಷೇತ್ರ ವಿಂಗಡಣೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವರ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಾಡಲು ಯೋಜಿಸುತ್ತಿರುವ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ಭಾರತದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ಫೆಬ್ರವರಿ 25 ರಂದು, ಈ ಬಗ್ಗೆ ಚರ್ಚಿಸಲು ಸಿಎಂ ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದು. ಕ್ಷೇತ್ರ ವಿಂಗಡನೆಯಿಂದ ತಮ್ಮ ರಾಜ್ಯ ಎಂಟು ಲೋಕಸಭಾ ಸ್ಥಾನಗಳು ಕಳೆದುಕೊಳ್ಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. “ತಮಿಳುನಾಡು ತನ್ನ ಹಕ್ಕುಗಳಿಗಾಗಿ ಗಂಭೀರ ಹೋರಾಟವನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡಣೆಯ ಬೆದರಿಕೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಡಮೋಕ್ಲಿಸ್‌ನ ಕತ್ತಿಯಂತೆ ನೇತಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದರು.

ಅವರ ಹೇಳಿಕೆಗಳ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.

“ಒಂದೇ ಒಂದು ಸ್ಥಾನವನ್ನು ಕೂಡಾ ಅನುಪಾತದಲ್ಲಿ ಕಡಿಮೆ ಮಾಡದಂತೆ ನೋಡಿಕೊಳ್ಳಲು ಮೋದಿ ಅವರು ನಿಮ್ಮ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ದಕ್ಷಿಣ ಭಾರತದ ಸಾರ್ವಜನಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಮತ್ತು ಎಷ್ಟೇ ಹೆಚ್ಚಳವಾದರೂ, ದಕ್ಷಿಣದ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗುತ್ತದೆ, ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ” ಎಂದು ಅಮಿತ್‌ ಶಾ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್‌ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಶುಕ್ರವಾರ, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಕೂಡಾ ಬಿಜೆಪಿಯು ದಕ್ಷಿಣದ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

2024ರ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಪ್ರಸ್ತಾವಿತ ಕ್ಷೇತ್ರ ವಿಂಗಡನೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.

ಕ್ಷೇತ್ರ ವಿಂಗಡನೆಯಿಂದ ಅತಿ ದೊಡ್ಡ ಹಿಂದಿ ಬೆಲ್ಟ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, 10 ಹಿಂದಿ ಬೆಲ್ಟ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ.

ಇದಕ್ಕೆ ಅನುಗುಣವಾಗಿ, ಹಿಂದಿ ಬೆಲ್ಟ್ ಅಲ್ಲದ ಕೇರಳ, ಪಶ್ಚಿಮ ಬಂಗಾಳ ಮತ್ತು ಎಲ್ಲಾ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...