Homeಮುಖಪುಟನಾನು ರಾಜೀನಾಮೆ ನೀಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟನೆ

ನಾನು ರಾಜೀನಾಮೆ ನೀಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟನೆ

- Advertisement -
- Advertisement -

ನಾನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ರಾಜೀನಾಮೆ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ಹೇಳಿದ್ದೆ ಎಂದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದವರು ಹೇಳಿಕೊಂಡಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಖಿತ, ಮೌಖಿಕವಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು. ಆದರೆ ಈಗ ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಕಂಡುಬರುತ್ತಿದೆ. ವಿ.ಸೋಮಣ್ಣ, ಆರ್ ಅಶೋಕ್, ಬಿ.ಶ್ರೀರಾಮುಲು, ಸಿ.ಟಿ ರವಿ ಮುಂತಾದವರು ಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಸೋಮಣ್ಣ ಅವರು ಮಾತನಾಡಿ ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದಾರೆ.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

ಇದನ್ನೂ ಓದಿ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...