- Advertisement -
- Advertisement -
ಹಾವೇರಿಯ ಯತ್ನಳ್ಳಿ ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು (ಮತ ಪೆಟ್ಟಿಗೆಗಳು) ಪತ್ತೆಯಾಗಿವೆ ಎಂದು ವರದಿಯಾಗಿದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ನಿನ್ನೆಯಷ್ಟೇ (ನ.13) ನಡೆದಿದೆ. ಈ ಬೆನ್ನಲ್ಲೇ ಇಂದು ಬ್ಯಾಲೆಟ್ ಬಾಕ್ಸ್‌ಗಳು ಕಾಲುವೆಯಲ್ಲಿ ಕಂಡು ಬಂದಿರುವುದು ಗ್ರಾಮಸ್ಥರಲ್ಲಿ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ “ಕಾಲುವೆಯಲ್ಲಿ ಕಬ್ಬಿಣದ ಬ್ಯಾಲೆಟ್ ಬಾಕ್ಸ್‌ಗಳು ಕಂಡು ಬಂದಿರುವುದಕ್ಕೂ, ಶಿಗ್ಗಾವಿ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ತಹಶೀಲ್ದಾರ್‌ಗೆ ಪರಿಶೀಲಿಸಲು ಸೂಚಿಸಿದ್ದೇನೆ. ಜನರಿಗೆ ಯಾವುದೇ ಅನುಮಾನ ಬೇಡ” ಎಂದು ಹೇಳಿರುವುದಾಗಿ ವರದಿಗಳು ತಿಳಿಸಿವೆ.
ಇದನ್ನೂ ಓದಿ : ಬಿಜೆಪಿಯಿಂದ ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರೂ. ಆಫರ್ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ


