Homeಕರ್ನಾಟಕಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

ಬಿಜೆಪಿ ಶಾಸಕ ನೆಹರು ಓಲೇಕಾರ ಕಿರುಕುಳ ಆರೋಪ: ದಲಿತ ಕುಟಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ

- Advertisement -
- Advertisement -

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹಳೇ ಶಿಡೇನೂರು ಗ್ರಾಮದಲ್ಲಿ ಜಮೀನು ವಿಚಾರದಲ್ಲಿ ಶಾಸಕ ನೆಹರು ಓಲೇಕಾರ ಮತ್ತು ಅವರ ಪುತ್ರ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಒಬ್ಬರು ಮಹಿಳೆ ಸೇರಿದಂತೆ ದಲಿತ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ 70 ವರ್ಷದ ಪಾಂಡಪ್ಪ ಕಬ್ಬೂರು, 65 ವರ್ಷದ ಗಂಗವ್ವ ಕಬ್ಬೂರು, ವರ್ಷದ 41 ಹನುಮಂತಪ್ಪ ಬಡಿಗೇರ್  ಮತ್ತು 72 ವರ್ಷದ ಗುರುಶಾಂತಪ್ಪ ಲಮಾಣಿ ಅವರನ್ನು ಬ್ಯಾಡಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆ ಎದುರು ಜಮಾಯಿಸಿದ ಗ್ರಾಮಸ್ಥರು ಬಿಜೆಪಿ ಶಾಸಕ ನೆಹರು ಓಲೇಕಾರ ವಿರುದ್ಧ ಘೋಷಣೆ ಕೂಗಿ ಶಾಸಕ ಹಾಗೂ ಅವರ ಪುತ್ರ ಮಂಜುನಾಥ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

2007-08 ರಲ್ಲಿ ರಾಜ್ಯ ಸರ್ಕಾರ 29 ದಲಿತ ಕುಟುಂಬಗಳಿಗೆ ತಲಾ ಒಂದು ಎಕರೆ 15 ಗುಂಟೆಗಳನ್ನು ನೀಡಿತ್ತು. ಗ್ರಾಮದ ಶೇಖರಗೌಡ ಪಾಟೀಲ ಎಂಬುವರು ದಲಿತ ಕುಟುಂಬಗಳಿಗೆ ನೀಡಿರುವ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಶಾಸಕರ ಮಗ ಮಂಜುನಾಥ್ ಅವರಿಗೆ ಬೆಂಬಲ ನೀಡಿದ್ದು, 15 ಗುಂಟೆ ಜಮೀನು ಬಿಟ್ಟು ನೀಡುವಂತೆ ದಲಿತ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಂಗಳವಾರವೂ ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿದ್ದು, ಜಮೀನು ಬಿಟ್ಟುಕೊಡುವಂತೆ ಕಿರುಕುಳ ನೀಡಿದ್ದಾರೆ. ಬಳಿಕ ನಾಲ್ವರು ವಿಷ ಸೇವಿಸಿದ್ದಾರೆ ಎಂದಿದ್ದಾರೆ. ಆದರೆ, ಶಾಸಕ ನೆಹರು ಓಲೇಕಾರ ಆರೋಪವನ್ನು ನಿರಾಕರಿಸಿದ್ದು, ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಅವರ ಕೈವಾಡವಿದೆ. ರೈತರನ್ನು ಅವರು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ನಾಲ್ವರ ಮೇಲೆ ಬುಧವಾರ ಪ್ರಕರಣ ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್, “ದಲಿತರಿಗೆ ಮಂಜೂರಾಗಿದ್ದ ಅಲ್ಪ ಭೂಮಿಯಲ್ಲೂ ಬಿಜೆಪಿ ಶಾಸಕ ನೆಹರು ಓಲೆಕಾರ್ ಕುಟುಂಬಕ್ಕೆ ಪಾಲು ಬೇಕಂತೆ! ಸಿಎಂ ಬಸವರಾಜ ಬೊಮ್ಮಾಯಿಯವರೇ, ನಿಮ್ಮದೇ ಜಿಲ್ಲೆಯಲ್ಲಿ ನಡೆದ ದೌರ್ಜನ್ಯವಿದು. ಸಿನೆಮಾ ನೋಡುವುದಷ್ಟೇ ಅಲ್ಲ, ಇಲ್ಲೂ ಸ್ವಲ್ಪ ನೋಡಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ, ದಲಿತರಿಗೆ ರಕ್ಷಣೆ ಕೊಡಿ. ಅವರ ಚಿಕಿತ್ಸೆ ಜವಾಬ್ದಾರಿಯನ್ನ ಸರ್ಕಾರವೇ ಹೊರಬೇಕು” ಎಂದಿದೆ.


ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is going on in our state?
    CM sir, please see what is happening in your state.
    You can witness cinemas later. First you attend burning problems of weaker sections.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...