Homeಕರ್ನಾಟಕಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

- Advertisement -
- Advertisement -

ಹಾವೇರಿ: ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಜೂ.7ರಂದು (ಶನಿವಾರ) ನಗರದ ಬಾರ್​ನಲ್ಲಿದ್ದ ಪೌರಕಾರ್ಮಿಕ ರಾಜು ದೊಡ್ಡಮನಿ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಬ್ಯಾಟ್ ಹಿಡಿದು ಬಂದ ಗುಂಪು ರಾಜು ಮೇಲೆ ಹಲ್ಲೆ ಮಾಡಿ ಪರಾರಿಯಾಗಿತ್ತು. ತೀವ್ರ ಗಾಯಗೊಂಡಿರುವ ರಾಜು ಹುಬ್ಬಳ್ಳಿಯ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಲ್ಲೆಗೆ ಮಂಗಳಮುಖಿ ಅಕ್ಷತಾ ಕಾರಣ ಎಂದು ಪೌರಕಾರ್ಮಿಕರು ಅಕ್ಷತಾ ಮತ್ತು ಆಕೆಯ 9 ಬೆಂಬಲಿಗರ ಮೇಲೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಕೂಡ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ. ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅಕ್ಷತಾ ಅವರ ಆಪ್ತ ಮಹಮ್ಮದ್ ಅವರು,  ಅಕ್ಷತಾ ಅವರು ಸಾಮಾಜಿಕ ಕಾರ್ಯಕ್ರಗಳಲ್ಲಿ ತೊಡಗಿಸಿಕೊಂಡವರು. ಹಿಂದುಳಿತ, ಶೋಷಿತ ಜನರಿಗಾಗಿ ಕೆಲಸ ಮಾಡುವವರು. ಯುವಕರನ್ನು ಒಗ್ಗೂಡಿಸಿ ಉತ್ತಮ ಕಾರ್ಯಕ್ರಮಗಳಲ್ಲಿ ತೊಡುಗುವಂತೆ ಮಾಡಿದ್ದಾರೆ. ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸುವವರು ಅಲ್ಲ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ವಿವರಿಸಿದ ಅವರು, ಶಾಂತು ಎಂಬ ಯುವಕನ ಜನ್ಮದಿನದ ಪ್ರಯುಕ್ತ ಬ್ಯಾನರ್ ಹಾಕಿದ್ದರು. ಅದನ್ನು ನಗರಸಭೆಯವರು ತೆರವು ಮಾಡಿದ್ದರು. ಈ ವೇಳೆ ಅಲ್ಲೆ ಇದ್ದ ಶಾಂತು ಪೌರ ಕಾರ್ಮಿಕರ ಜೊತೆ ವಾಗ್ವಾದ ನಡೆಸಿದ್ದರು. ಶಾಂತು ಅಕ್ಷತಾ ಅವರ ಜೊತೆ ಗುರುತಿಸಿಕೊಂಡಿದ್ದರಿಂದ ಬ್ಯಾನರ್ ತೆರವುಗೊಳಿಸಿದ ವಿಷಯವನ್ನು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಆತನಿಗೆ ಬುದ್ದಿಮಾತು ಹೇಳಿ, ನಗರಸಭೆಗೆ ತೆರಳಿ ಪೌರಾಯುಕ್ತರನ್ನು ಭೇಟಿಯಾಗಿದ್ದರು. ಅಲ್ಲಿ ಯುವಕರ ಬ್ಯಾನರ್ ವಾಪಸ್ ಕೊಡಿ, ಅವರು ಪರವಾನಿಗೆ ತೆಗೆದುಕೊಂಡು ಹಾಕುತ್ತಾರೆ ಎಂದು ಹೇಳಿ ಬಂದಿದ್ದರು. ಅಲ್ಲಿಗೆ ಒಂದು ಹಂತಕ್ಕೆ ವಿಷಯ ಮುಗಿದಿತ್ತು ಎಂದು ಮಹಮ್ಮದ್ ತಿಳಿಸಿದ್ದಾರೆ.

ಇದಾದ ಬಳಿಕ ಕೆಲ ಸಂಘಟನೆಗಳ ಮುಖಂಡರು ಮತ್ತು ಪೌರ ಕಾರ್ಮಿಕರು ನಗರಸಭೆ ಬಳಿ ಜಮಾಯಿಸಿ ಶಾಂತು ಜೊತೆ ವಾಗ್ವಾದ ನಡೆಸಿದ್ದಾರೆ. ಅಕ್ಷತಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವಿಷಯವನ್ನು ಯುವಕರು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಸ್ಥಳಕ್ಕೆ ತೆರಳಿದಾಗ ಮತ್ತೆ ವಾಗ್ವಾದ ಜೋರಾಗಿದೆ. ಡಿಎಸ್‌ಎಸ್ ಮುಖಂಡ ಹೊನ್ನಪ್ಪ ಅವರ ನೇತೃತ್ವದಲ್ಲಿ ಸೇರಿದ್ದ ಮುಖಂಡರು ಮತ್ತು ಪೌರ ಕಾರ್ಮಿಕರು ಅಕ್ಷತಾಗೆ ನಿಂದಿಸಿದ್ದಾರೆ. ಗುಂಪು ಸೇರಿದ್ದ ಜನರು ಶಾಂತುಗೆ ಥಳಿಸಿದ್ದಾರೆ. ಬಳಿಕ ಅಕ್ಷತಾ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಕ್ಷತಾ ಬಟ್ಟೆ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ವಿಡಿಯೋವನ್ನು ನೀವು ನೋಡಿರಬಹುದು. ಬೇಕಾದರೆ ನಗರಸಭೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಿ ಎಂದು ಮಹಮ್ಮದ್ ಹೇಳಿದ್ದಾರೆ.

ಮುಂದುವರಿದು, ನಗರಸಭೆಯ ಮುಂದೆ ಇಷ್ಟೆಲ್ಲಾ ಘಟನೆಗಳು ಆದ ಬಳಿಕ, ನಗರಸಭೆಯ ಒಳಗೆ ಸಂಧಾನ ನಡೆದಿದೆ. ಅಲ್ಲಿ ನಗರಸಭೆ ಅಧ್ಯಕ್ಷರು, ಆಯುಕ್ತರು ಸೇರಿದಂತೆ ಪ್ರಮುಖರು ಇದ್ದರು. ದಲಿತ ಸಂಘಟನೆಗಳ ಪ್ರಮುಖರು ಮತ್ತು ಅಕ್ಷತಾ ಕಡೆಯವರು ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಂಡಿದ್ದರು. ಅಕ್ಷತಾ ಅಲ್ಲಿಂದ ಮನೆಗೆ ತೆರಳಿದ್ದರು. ಆದರೆ, ನಗರಸಭೆ ಬಳಿ ನಡೆದ ಘಟನೆಯಿಂದ ಅವರ ಮನಸ್ಸಿಗೆ ಘಾಸಿಯಾಗಿತ್ತು. ಇನ್ನುಮುಂದೆ ಯಾವುದೇ ವಿಚಾರಕ್ಕೆ ತಲೆ ಹಾಕುವುದಿಲ್ಲ ಎಂದು ನನ್ನ ಬಳಿ ಹೇಳಿದ್ದರು. ಒಂದೆರಡು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಾದರು ಹೋಗುತ್ತೇನೆ ಎಂದಿದ್ದರು. ಅಕ್ಷತಾ ಹೆಸರು ಹೇಳಿಕೊಂಡು ಯಾವುದೇ ಹೊಡೆದಾಟಕ್ಕೆ ಹೋಗಬೇಡಿ ಎಂದು ಆಕೆಯ ಪರವಾಗಿ ನಾನು ಯುವಕರಿಗೆ ಹೇಳಿ ಬಂದಿದ್ದೆ ಎಂದು ಮಹಮ್ಮದ್ ವಿವರಿಸಿದ್ದಾರೆ.

ನಗರಸಭೆಯ ಬಳಿ ನಡೆದ ಘಟನೆಯ ಬಳಿಕ ಅಕ್ಷತಾ ಯಾವುದೇ ವಿಚಾರಕ್ಕೆ ತಲೆ ಹಾಕಿರಲಿಲ್ಲ. ಆದರೆ, ಆಕೆ ಬುದ್ದಿವಾದ ಹೇಳಿದ ಬಳಿಕವೂ, ಮರುದಿನ ಶಾಂತು ನೇತೃತ್ವದಲ್ಲಿ ಯುವಕರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಅದಕ್ಕೂ ಅಕ್ಷತಾಗೂ ಯಾವುದೇ ಸಂಬಂಧ ಇಲ್ಲ. ಆದರೆ, ಸಂಘಟನೆಗಳ ಮುಖಂಡರು ಅಕ್ಷತಾಳೆ ಹಲ್ಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಯುವಕರಿಗೂ ಮತ್ತು ಪೌರ ಕಾರ್ಮಿಕರಿಗೆ  ಕೆಲಸ ವಿಚಾರಗಳಿಗೆ ಆಗಾಗ ವಾಗ್ವಾದಗಳು ನಡೆಯುತ್ತಿತ್ತು. ಅದರ ಮುಂದುವರಿದ ಭಾಗವಾಗಿ ಹಲ್ಲೆ ಮಾಡಿರಬಹುದು. ಅಲ್ಲದೆ ಅಕ್ಷತಾ ಯಾವುದೇ ಕಾರಣಕ್ಕೂ ಹಲ್ಲೆ ಮಾಡಿಸಿಲ್ಲ. ಆಕೆ ಪೌರ ಕಾರ್ಮಿಕರ ಪರವಾಗಿಯೇ ಕೆಲಸ ಮಾಡುವವರು ಎಂದು ಮಹಮ್ಮದ್ ಹೇಳಿದ್ದಾರೆ.

ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರರು

ಟ್ರಾನ್ಸ್‌ಜೆಂಡರ್ ಅಕ್ಷತಾ ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಪರ ಹೋರಾಟಗಾರ ಮಲ್ಲು ಕಂಬಾರ್, “ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ನಾನು ಖಂಡಿಸುತ್ತೇನೆ. ಅದು ನಾಗರಿಕ ಸಮಾಜ ಒಪ್ಪುವಂತದ್ದಲ್ಲ. ಈ ಪ್ರಕರಣದಲ್ಲಿ ಅಕ್ಷತಾ ಅವರ ವಿರುದ್ದ ಆರೋಪ ಕೇಳಿ ಬಂದಿದೆ. ಆದರೆ, ಅವರ ಕಡೆಯವರು ಅಕ್ಷತಾ ಅವರ ಪಾತ್ರವಿಲ್ಲ ಎನ್ನುತ್ತಿದ್ದಾರೆ. ಆದ್ದರಿಂದ ಘಟನೆಯ ಹಿಂದಿನ ಸತ್ಯಾಸತ್ಯಾತೆ ಏನು ಎಂದು ನನಗೆ ಗೊತ್ತಿಲ್ಲ. ಸರಿಯಾದ ತನಿಖೆಯಿಂದ ಅದು ತಿಳಿದು ಬರಬೇಕಿದೆ. ಸದ್ಯಕ್ಕೆ ನಾನು ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ಖಂಡಿಸುತ್ತೇನೆ. ಇದನ್ನು ಹೊರತು ಪ್ರಕರಣದಲ್ಲಿ ತಲೆ ಹಾಕಲು ಹೋಗುದಿಲ್ಲ. ನನ್ನ ಸಮುದಾಯವಾಗಲೀ, ಪೌರ ಕಾರ್ಮಿಕರಾಗಲಿ ಯಾರನ್ನೂ ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಹಾವೇರಿ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ” ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತದಿಂದ 300ಕ್ಕೂ ಅಧಿಕ ಜನರು ಬಾಂಗ್ಲಾಕ್ಕೆ ಗಡೀಪಾರು: ಧ್ವನಿ ಎತ್ತಿದ ಮಾನವ ಹಕ್ಕು ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...