Homeಕರ್ನಾಟಕಹಾವೇರಿ: ಮಸೀದಿ, ಶಾಲಾ ಮಕ್ಕಳ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಕಲ್ಲು ತೂರಾಟ

ಹಾವೇರಿ: ಮಸೀದಿ, ಶಾಲಾ ಮಕ್ಕಳ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಕಲ್ಲು ತೂರಾಟ

- Advertisement -
- Advertisement -

ಸಂಘಪರಿವಾರದ ಕಾರ್ಯಕರ್ತರು ಬೈಕ್ ರ್ಯಾಲಿ ವೇಳೆ ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಮಂಗಳವಾರ ನಡೆಸಿದೆ ಎಂದು ವರದಿಯಾಗಿದೆ.

ಮಾರ್ಚ್ 9ರಂದು ಎರಡು ಕೋಮುಗಳ ನಡುವಿನ ಗಲಾಟೆ ನಡೆದಿತ್ತು, ಮಂಗಳವಾರ ಈ ಗಲಾಟೆಯು ಮುಂದುವರೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತಾಗಿದೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಮಂಗಳವಾರ ಸಂಘಪರಿವಾರದ ಕಾರ್ಯಕರ್ತರು ರಟ್ಟೀಹಳ್ಳಿಯ ಪ್ರಮುಖ ಬೀದಿಯಲ್ಲಿ ಬೈಕ್ ರ್ಯಾಲಿ ಏರ್ಪಡಿಸಿದ್ದರು. ಬೈಕ್ ರ್ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ.

ರಟ್ಟೀಹಳ್ಳಿಯ ಕಾರಂಜಿ ಸರ್ಕಲ್‌ನಲ್ಲಿ ಬೈಕ್ ರ್ಯಾಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಮಸೀದಿ, ಮನೆಗಳು ಹಾಗೂ ಉರ್ದು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಸಲಾಗಿದೆ. ಕಲ್ಲು ತೂರಾಟದ ವೇಳೆ ಕೆಲ ಮಕ್ಕಳು ಹಾಗೂ ಮಹಿಳೆಯರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದು, ಹೈ ಆಲರ್ಟ್ ಘೋಷಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ಮೂರ್ತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಂಘಪರಿವಾರದವರು ಮಂಗಳವಾರ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡು ಈ ವೇಳೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ.

ಘಟನೆ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ನೆಟ್ಟಿಗರು, ”ಶಾಲೆಗೆ ಹೋಗಿದ್ದ ಮಕ್ಕಳ ಮೇಲೆ ಭಜರಂಗದಳದ ಗೂಂಡಾ ಗಳಿಂದ ಕಲ್ಲು ತೂರಾಟ ನಡೆದಿದೆ. ಇವರ ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತಿರಿ? ಎಂದು ಸಚಿವ ಬಿಸಿ ಪಾಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

 

ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

ಎರಡು ಕೋಮುಗಳ ನಡುವೆ ಕಲಹ ಮಂಗಳವಾರ ಕಲ್ಲು ತೂರಾಟ ನಡೆಯುವ ಮಟ್ಟಕ್ಕೆ ಹೋಗಿದೆ. ಇದು ಹಾವೇರಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎನ್ನುವುದನ್ನು ಎತ್ತಿ ತೋರಿಸುತ್ತದೆ.

ಮಾರ್ಚ್ 3ರಂದು ಮುಖ್ಯಮಂತ್ರಿಗಳ ಜಿಲ್ಲೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದ ಘಟನೆ ವರದಿಯಾಗಿತ್ತು. ದಲಿತ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ  ಸವರ್ಣೀಯರು ಬೆಂಕಿ ಹಚ್ಚಿದ್ದರು. ಇಂತಹ ಅಮಾನವೀಯ ಘಟನೆ ಮುಖ್ಯಮಂತ್ರಿಯ ತವರು ಜಿಲ್ಲೆಯಲ್ಲಿ ನಡೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಇಂತಹ ಘಟನೆಗಳು ಹಾವೇರಿ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಎಲ್ಲಯೂ ನಡೆಯದಂತೆ ಕ್ರಮವಹಿಸಬೇಕು. ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವವ್ಯಸ್ಥೆಯನ್ನು ಸರಿಪಡಿಸಬೇಕು.

ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...