ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 13 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ತೀವ್ರಗೊಳಿಸಿದ ರೈತರು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಇಷ್ಟು ದಿನಗಳಿಂದ ದೇಶದ ಸಮಸ್ಯೆಗಳ ಬಗ್ಗೆ ಒಂದು ಮಾತಾನಾಡಿಲ್ಲ ಎಂಬ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಇಂದು ರೈತರಿಗೆ ಬೆಂಬಲ ಸೂಚಿಸಿದ್ದಾರೆ.
ಅಣ್ಣಾ ಹಜಾರೆ ಅವರು ದಿನವಿಡೀ ಉಪವಾಸ ಸತ್ಯಾಗ್ರಹ ಮಾಡಿ ಬಂದ್‌ಗೆ ಕರೆ ನೀಡಿರುವ ನಡೆಸುವ ರೈತರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಳ್ಳಿಯಲ್ಲಿ ದಿನವಿಡೀ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿಯೂ, ರೈತರ ಹಿತದೃಷ್ಟಿಯಿಂದ ಸರ್ಕಾರ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದಾರೆ. ರೈತರ ಚಳುವಳಿ ದೇಶಾದ್ಯಂತ ಹರಡಬೇಕು ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಇತ್ತ ಭಾರತ್ ಬಂದ್ ಅಂಗವಾಗಿ ಬೆಗುಸರೈನಲ್ಲಿ ಕಾರ್ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೊಶ ವ್ಯಕ್ತಪಡಿಸಲಾಗಿದೆ. ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಧ್ಯಾಹ್ನ 3 ರವರೆಗೆ ‘ಚಕ್ಕಾ ಜಾಮ್’ ಸಮಯದಲ್ಲಿ ಮುಖ್ಯ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಪ್ರತಿಭಟನಾಕಾರರ ಮೇಲೆ ಕಣ್ಣಿಡಲು ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಡ್ರೋನ್ ಕಣ್ಗಾವಲು ಕ್ಯಾಮೆರಾವನ್ನು ಬಳಸುತ್ತಿದ್ದಾರೆ. ಬಂದ್ ಸಮಯದಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ.
’ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ ಎಂದು ಆಪ್ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಆರೋಪಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ಮುಖಂಡ ಶರದ್ ಪವಾರ್, ಸಿಪಿಐ (ಎಂ) ನ ಸೀತಾರಾಮ್ ಯೆಚೂರಿ ಸೇರಿದಂತೆ ಇತರ ನಾಯಕರು ಜಂಟಿ ಹೇಳಿಕೆ ನೀಡಿದ್ದು, ಭಾರತ್ ಬಂದ್ ಕರೆಯನ್ನು ಬೆಂಬಲಿಸಿದ್ದಾರೆ. ಪ್ರತಿಭಟನಾ ನಿರತ ರೈತರು ಬುಧವಾರ ಮತ್ತೊಂದು ಸುತ್ತಿನ ಮಾತುಕತೆಗಾಗಿ ಕೇಂದ್ರ ಸರ್ಕಾರವನ್ನು ಭೇಟಿಯಾಗಲಿದ್ದಾರೆ.


