Homeಚಳವಳಿರೈತರ ಮೇಲೆ ಡ್ರೋನ್ ಕಣ್ಗಾವಲಿಟ್ಟ ಸರ್ಕಾರ: ಭಾರತ್ ಬಂದ್‌ ಬೆಂಬಲಿಸಿ ಅಣ್ಣಾ ಹಜಾರೆ ಉಪವಾಸ

ರೈತರ ಮೇಲೆ ಡ್ರೋನ್ ಕಣ್ಗಾವಲಿಟ್ಟ ಸರ್ಕಾರ: ಭಾರತ್ ಬಂದ್‌ ಬೆಂಬಲಿಸಿ ಅಣ್ಣಾ ಹಜಾರೆ ಉಪವಾಸ

ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ‘ಚಕ್ಕಾ ಜಾಮ್’ ಮಾಡಿ ಮುಖ್ಯ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 13 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ತೀವ್ರಗೊಳಿಸಿದ ರೈತರು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಇಷ್ಟು ದಿನಗಳಿಂದ ದೇಶದ ಸಮಸ್ಯೆಗಳ ಬಗ್ಗೆ ಒಂದು ಮಾತಾನಾಡಿಲ್ಲ ಎಂಬ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಇಂದು ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಅಣ್ಣಾ ಹಜಾರೆ ಅವರು ದಿನವಿಡೀ ಉಪವಾಸ ಸತ್ಯಾಗ್ರಹ ಮಾಡಿ ಬಂದ್‌ಗೆ ಕರೆ ನೀಡಿರುವ ನಡೆಸುವ ರೈತರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಳ್ಳಿಯಲ್ಲಿ ದಿನವಿಡೀ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿಯೂ, ರೈತರ ​​ಹಿತದೃಷ್ಟಿಯಿಂದ ಸರ್ಕಾರ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದಾರೆ. ರೈತರ ಚಳುವಳಿ ದೇಶಾದ್ಯಂತ ಹರಡಬೇಕು ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಇತ್ತ ಭಾರತ್ ಬಂದ್ ಅಂಗವಾಗಿ ಬೆಗುಸರೈನಲ್ಲಿ ಕಾರ್ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೊಶ ವ್ಯಕ್ತಪಡಿಸಲಾಗಿದೆ. ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಧ್ಯಾಹ್ನ 3 ರವರೆಗೆ ‘ಚಕ್ಕಾ ಜಾಮ್’ ಸಮಯದಲ್ಲಿ ಮುಖ್ಯ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

Bharat Bandh: Hazare Joins Protest; Car Tyres Set Ablaze in Bihar
PC: The Quint

ಪ್ರತಿಭಟನಾಕಾರರ ಮೇಲೆ ಕಣ್ಣಿಡಲು ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಡ್ರೋನ್ ಕಣ್ಗಾವಲು ಕ್ಯಾಮೆರಾವನ್ನು ಬಳಸುತ್ತಿದ್ದಾರೆ. ಬಂದ್ ಸಮಯದಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ.

’ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ ಎಂದು ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಆರೋಪಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ಮುಖಂಡ ಶರದ್ ಪವಾರ್, ಸಿಪಿಐ (ಎಂ) ನ ಸೀತಾರಾಮ್ ಯೆಚೂರಿ ಸೇರಿದಂತೆ ಇತರ ನಾಯಕರು ಜಂಟಿ ಹೇಳಿಕೆ ನೀಡಿದ್ದು, ಭಾರತ್ ಬಂದ್ ಕರೆಯನ್ನು ಬೆಂಬಲಿಸಿದ್ದಾರೆ. ಪ್ರತಿಭಟನಾ ನಿರತ ರೈತರು ಬುಧವಾರ ಮತ್ತೊಂದು ಸುತ್ತಿನ ಮಾತುಕತೆಗಾಗಿ ಕೇಂದ್ರ ಸರ್ಕಾರವನ್ನು ಭೇಟಿಯಾಗಲಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...