Homeಕರ್ನಾಟಕಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

- Advertisement -
- Advertisement -

ರಾಜಕೀಯ ಪಕ್ಷಗಳು ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುತ್ತಿದ್ದು, ಅದನ್ನು ನಿರ್ಬಂಧಿಸಲು ಚುನಾವಣಾ ಆಯೋಗಕ್ಕೆ ಸೂಕ್ತ ಮಾರ್ಗಸೂಚಿ ರೂಪಿಸಲು ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮೂರು ತಿಂಗಳ ಕಾಲ ಮುಂದೂಡಿದೆ.

ಈ ಸಂಬಂಧ ಬೆಂಗಳೂರಿನ ನಿವೃತ್ತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಮಂಗಳವಾರ ನಡೆಯಿತು.

ಚುನಾವಣೆಯ ವೇಳೆ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಉಡುಗೊರೆಗಳ (ಫ್ರೀಬೀಸ್‌) ಪ್ರಕರಣವು ಸುಪ್ರೀಂ ಕೋರ್ಟ್‌ ಪರಿಗಣನೆಯಲ್ಲಿದೆ ಎಂದಿರುವ ಹೈಕೋರ್ಟ್‌, ಅರ್ಜಿಯ ವಿಚಾರಣೆಯನ್ನು ಹನ್ನೆರಡು ವಾರಗಳ ಕಾಲ ಮುಂದೂಡಿತು.

ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮಮೂರ್ತಿ ಪಿ.ಬಿ ವರಾಳೆ ಅವರು “ಸದರಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮದೇ ಆದ ಅಭಿಪ್ರಾಯ ಮತ್ತು ಮಿತಿ ಇರಬಹುದು. ಆದರೆ, ಪ್ರಕರಣವು ಸುಪ್ರೀಂ ಕೋರ್ಟ್‌ ಮುಂದಿದೆ. ನಾವು ಈಗ ಪ್ರತಿವಾದಿಗಳಿಗೆ ನೋಟಿಸ್‌ ಕೂಡ ಜಾರಿ ಮಾಡುವುದಿಲ್ಲ. ಸರ್ವೋಚ್ಚ ನ್ಯಾಯಾಲಯದಲ್ಲಿ ಏನಾಗುತ್ತದೋ ಕಾದು ನೋಡೋಣ. ವಿಚಾರಣೆಯನ್ನು 12 ವಾರಗಳ ಕಾಲ ಮುಂದೂಡಲಾಗುವುದು” ಎಂದು ಹೇಳಿದ್ದಾರೆ.

ಅರ್ಜಿಯಲ್ಲಿ ಏನಿದೆ?

ರಾಜಕೀಯ ಪಕ್ಷಗಳು ಜನರ ತೆರಿಗೆ ಹಣದಲ್ಲಿ ಅಧಿಕಾರ ಲಾಲಸೆಗೆ ಮತದಾರರಿಗೆ ಆಮಿಷವೊಡ್ಡಿ ಅವರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಮತದಾರರಿಗೆ ಪ್ರಲೋಭನೆ ಒಡ್ಡಿ ಮತ ಕೇಳುವುದು ಸಂವಿಧಾನಬಾಹಿರ ಹಾಗೂ ಜನಪ್ರತಿನಿಧಿಗಳ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹೀಗಾಗಿ, ಸೂಕ್ತ ಮಾರ್ಗಸೂಚಿ ರೂಪಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...