Homeಕರ್ನಾಟಕಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್‌ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್‌ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕಾಂಗ್ರೆಸ್‌ ಪಕ್ಷದ ಕೆವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್ ದೇವದಾಸ್ ಅವರ ಏಕಸದಸ್ಯ ಪೀಠ ನಡೆಸಿದೆ.

ಕೇಂದ್ರ ಚುನಾವಣಾ ಆಯೋಗದ ಪರ ವಕೀಲ ಶರತ್‌ ದೊಡ್ಡವಾಡ ಅವರು, ಮತ ಎಣಿಕೆ ವೇಳೆ ವಿವಿ ಪ್ಯಾಟ್‌ ಎಣಿಕೆ ಮತ್ತು ಹೊಂದಾಣಿಕೆ ಕಾರ್ಯದ ಚಿತ್ರೀಕರಣ ಮಾಡಲಾಗಿತ್ತು. ಆ ದೃಶ್ಯಾವಳಿ ಒಳಗೊಂಡ ಒಂದು ಸಿಡಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಇವಿಎಂ ಇರಿಸಲಾಗಿದ್ದ ಸ್ಟ್ರಾಂಗ್‌ ರೂಂ ತೆರೆದು ಪರಿಶೀಲನೆ ನಡೆಸಲಾಗಿದೆ. ಅಲ್ಲಿ ವಿವಿ ಪ್ಯಾಟ್‌ ಎಣಿಕೆ ಮತ್ತು ಹೊಂದಾಣಿಕ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಗಳನ್ನು ಒಳಗೊಂಡ ಮೂರು ಸಿಡಿಗಳು ಲಭ್ಯವಾಗಿವೆ. ಮತ ಎಣಿಕೆ ವೇಳೆ ಅಭ್ಯರ್ಥಿಗಳ ಏಜೆಂಟರಿಗೆ ನೀಡಲಾಗಿದ್ದ ಫಾರ್ಮ್‌ ನಂ.17(ಸಿ) ನಕಲು ಪ್ರತಿ ಸಹ ಲಭ್ಯವಾಗಿದೆ. ಅವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಸಂಬಂಧಿತ ಸಿಡಿ ಹಾಗೂ ಫಾರ್ಮ್‌ ನಂ.17 (ಸಿ)ಯ ನಕಲು ಪ್ರತಿಯನ್ನು ಆಗಸ್ಟ್‌ 19ರಂದು ಸಲ್ಲಿಸುವಂತೆ ಚುನಾವಣಾ ಆಯೋಗದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿದೆ.

ಮಾಲೂರು ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಲವು ಲೋಪ ದೋಷಗಳಾಗಿವೆ. ಇದರಿಂದ ಆ ಕ್ಷೇತ್ರದಿಂದ ಶಾಸಕರಾಗಿ ಕೆ ವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ : ‘ಎಸ್‌ಬಿಐ-ಪಿಎನ್‌ಬಿ’ಯೊಂದಿಗಿನ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...