Homeಕರ್ನಾಟಕಡಿಕೆಶಿ ವಿರುದ್ದದ ಸಿಬಿಐ ತನಿಖೆ ವಾಪಸ್ | ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾ

ಡಿಕೆಶಿ ವಿರುದ್ದದ ಸಿಬಿಐ ತನಿಖೆ ವಾಪಸ್ | ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾ

ಸಿಬಿಐ ಮತ್ತು ಶಾಸಕ ಯತ್ನಾಳ್ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ದ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇಂದು (ಆ.29) ವಜಾಗೊಳಿಸಿದೆ.

ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಎಂ ಅಡಿಗ ಅವರ ವಿಭಾಗೀಯ ಪೀಠ, ಆಗಸ್ಟ್ 12 ರಂದು ಆದೇಶ ಕಾಯ್ದಿರಿಸಿತ್ತು.

ಇಂದು ಆದೇಶ ಪ್ರಕಟಿಸಿರುವ ಹೈಕೋರ್ಟ್, ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಇದರಿಂದ ಡಿಸಿಎಂ ಡಿಕೆಶಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಡಿಕೆ ಶಿವಕುಮಾರ್ ವಿರುದ್ದ ದಾಖಲಿಸಿದ್ದ ಪ್ರಕರಣದ ತನಿಖೆ ನಡೆಸಲು ಯಡಿಯೂರಪ್ಪ ನೇತೃತ್ವದ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಅದನ್ನು 2023ರ ನವೆಂಬರ್‌ 28ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು.

ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ಬೆನ್ನಲ್ಲೇ, ಡಿಕೆ ಶಿವಕುಮಾರ್‌ ಅವರು ಮೇಲ್ಮನವಿ ಕೂಡ ವಾಪಸ್ ಪಡೆದಿದ್ದರು. ನಂತರ 2023ರ ಡಿಸೆಂಬರ್‌ 24 ಮತ್ತು 26ರ ತಿದ್ದುಪಡಿ ಆದೇಶ ಮೂಲಕ ರಾಜ್ಯ ಸರ್ಕಾರ ಪ್ರಕರಣವನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು.

ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕೋರ್ಟ್ ಮೊರೆ ಹೋಗಿದ್ದರು. ಎರಡೂ ಕಡೆಯವರ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...