Homeಕರ್ನಾಟಕಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ ವಿಧಿಸಿದ ಹೈಕೋರ್ಟ್

- Advertisement -
- Advertisement -

ನಿವೃತ್ತ ಗ್ರಂಥಪಾಲಕಿಯೊಬ್ಬರ ವೇತನ ಮತ್ತು ಹಿಂಬಾಕಿ ಪಾವತಿ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ರಾಜ್ಯ ಸರ್ಕಾರವನ್ನು ಹೈಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದ್ದು, 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರಿನ ವಿ.ಎ.ನಾಗಮಣಿ ಎಂಬವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಸರ್ಕಾರದ ವಿರುದ್ದ ಕೆಂಡಾಮಂಡಲವಾಗಿದೆ.

“ಸರ್ಕಾರಕ್ಕೆ ಮೃದು ಭಾಷೆಯ ಆದೇಶ ಅರ್ಥವಾಗುವುದಿಲ್ಲ. ನಾವು ಪ್ರತಿಯೊಂದು ಆದೇಶವನ್ನು ಆಸಿಡ್‌ನಲ್ಲಿ ಅದ್ದಿದ ಲೇಖನಿಯಲ್ಲಿ (ಕಠಿಣವಾಗಿ) ಬರೆಯಬೇಕಿದೆ” ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಮೆಮೋ ಸಲ್ಲಿಸಿದ್ದ ವಕೀಲರು, ನ್ಯಾಯಾಲಯದ ಆದೇಶ ಪಾಲಿಸಲು ಆರು ವಾರಗಳ ಕಾಲವಕಾಶ ನೀಡುವಂತೆ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಸಾಮಾನ್ಯವಾಗಿ ಸರ್ಕಾರ ಕೋರಿದರೆ ನ್ಯಾಯಾಲಯವು ಆರು ವಾರಗಳ ಸಮಯ ನೀಡುತ್ತದೆ. ಆದರೆ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಸಮಯ ನೀಡಲು ಸಾಧ್ಯವಿಲ್ಲ ಎಂದಿದೆ.

ಪ್ರಕರಣ ಹಿನ್ನೆಲೆ : ಬೆಂಗಳೂರಿನ ಕೋನೇನ ಅಗ್ರಹಾರದ ಸರ್.ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ನಿವೃತ್ತಿ ಹೊಂದಿರುವ ಗ್ರಂಥಪಾಲಕಿ ವಿ.ಎ.ನಾಗಮಣಿ ಅವರು, ತಮಗೆ ಗ್ರಂಥಪಾಲಕರ ದರ್ಜೆಯ ವೇತನ‌ ಮಂಜೂರು ಮಾಡಲು 2014ರಲ್ಲಿ ಹೈಕೋರ್ಟ್‌ಗೆ ಕೋರಿದ್ದರು.

ರಾಜ್ಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ 250ಕ್ಕೂ ಹೆಚ್ಚು ನೌಕರರು ಗ್ರಂಥಪಾಲಕರ ಹುದ್ದೆಯ ವೇತನ ಶ್ರೇಣಿ ಹೊಂದಿದ್ದು, ನನಗೂ ಇದೇ ವೇತನ ಶ್ರೇಣಿಯನ್ನು ಅನ್ವಯಿಸಲು ಆದೇಶಿಸಬೇಕು ಎಂದು ಮನವಿ ಮಾಡಿದ್ದರು.

ಅಕ್ಟೋಬರ್‌ 2021ರಲ್ಲಿ ನಾಗಮಣಿ ಅವರ ರಿಟ್ ಅರ್ಜಿ ಮಾನ್ಯ ಮಾಡಿದ್ದ ಹೈಕೋರ್ಟ್, ಅವರ ವೇತನ ತಾರತಮ್ಯ ಸರಿಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿ, ಎರಡು ತಿಂಗಳ ಗಡುವು ನೀಡಿತ್ತು. ಆದರೆ, ರಾಜ್ಯ ಸರ್ಕಾರದ ಹೈಕೋರ್ಟ್‌ ಆದೇಶ ಪಾಲಿಸಿರಲಿಲ್ಲ. ಈ ಹಿನ್ನೆಲೆ, ನಾಗಮಣಿ ಅವರು ರಾಜ್ಯ ಸರ್ಕಾರದ ವಿರುದ್ದ ಸಿವಿಲ್ ನ್ಯಾಯಾಂಗ ‌ನಿಂದನೆ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ : ಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ವಾರ್ಡನ್‌ಗಳ ಕೊರತೆ: ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...