Homeಮುಖಪುಟತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ.

ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್ ಜಿ.ಎಸ್. ಆಶಾನಾಥ್ ಮತ್ತು ಕೌನ್ಸಿಲರ್ ಆರ್. ವಿನೋದ್ ಅವರು ‘ಭಾರತ ಮಾತೆ’ಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇತರ ಕೆಲವು ಕೌನ್ಸಿಲರ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪರಿಭಾಷೆಯಾದ ‘ಬಲಿದಾನಿ’ಗಳ (ಹುತಾತ್ಮರು) ಹೆಸರಿನಲ್ಲಿ ಪ್ರಮಾಣ ವಚನ ವಚನ ಸ್ವೀಕಾರ ಮಾಡಿದ್ದರು. ಇನ್ನು ಹಲವರು ಶ್ರೀ ಪದ್ಮನಾಭಸ್ವಾಮಿ ಹಾಗೂ ಕೆಲವರು ‘ಆಟ್ಟುಕಲ್ ಅಮ್ಮ’ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇವರ ಜೊತೆಗೆ ಕೆಲವರು ತಮ್ಮ ಸ್ಥಳೀಯ ದೇವತೆಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು; ಉದಾಹರಣೆಗೆ ತಿರುವಲ್ಲಂ ಕೌನ್ಸಿಲರ್ ಗೋಪಕುಮಾರ್ ಅವರು ತಿರುವಲ್ಲಂ ಪರಶುರಾಮರ ಹೆಸರಿನಲ್ಲಿ, ಕಮಲೇಶ್ವರಂ ಕೌನ್ಸಿಲರ್ ವಿ. ಗಿರಿ ಅವರು ಇರುಂಕುಳಂಗರ ದುರ್ಗಾ ಭಗವತಿಯ ಹೆಸರಿನಲ್ಲಿ ಮತ್ತು ಪಂಗೋಡ್ ಕೌನ್ಸಿಲರ್ ವಿಷ್ಣು ಮೋಹನ್ ಅವರು ಉದಿಯನ್ನೂರು ದೇವಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೆಯೇ ವಲಿಯಾಸಾಲ ಕೌನ್ಸಿಲರ್ ವಿ.ಎಸ್. ಸೂರ್ಯ ಅವರು ‘ಕಾವಿಲಮ್ಮ’ನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

20 ಕೌನ್ಸಿಲರ್‌ಗಳಲ್ಲಿ ಆರ್. ಸುಗತನ್ ಕೂಡ ಒಬ್ಬರು. ಇವರನ್ನು ಕೇರಳದ ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಕಾಪಾ) ಅಡಿಯಲ್ಲಿ ಬಂಧಿಸಲಾಗಿದೆ. ಇವರು ಪ್ರಸ್ತುತ ತ್ರಿಸ್ಸೂರ್‌ನ ವಿಯ್ಯೂರ್ ಸೆಂಟ್ರಲ್ ಜೈಲಿನ ಉನ್ನತ ಭದ್ರತಾ ಸುಧಾರಣಾ ಕೇಂದ್ರದಲ್ಲಿದ್ದಾರೆ. ಕೊಲೆಯತ್ನ ಸೇರಿದಂತೆ ಹಲವಾರು ಗಂಭೀರ ಆರೋಪಗಳು ಒಳಗೊಂಡಂತೆ ಇವರ ವಿರುದ್ಧ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಇವರು ಮುಂದಿನ ನಾಲ್ಕು ವಾರಗಳೊಳಗೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಗತನ್ ಅವರು ಈ ಹಿಂದೆ ‘ಗುರುದೇವನ್’ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯಡಿಎಫ್‌) ಎರಡೂ ಒಟ್ಟಿಗೆ ಸೇರಿ ಈ 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಒತ್ತಾಯಿಸುತ್ತಿವೆ.

ಎಲ್‌ಡಿಎಫ್‌ ಕೌನ್ಸಿಲ್ ಪಕ್ಷದ ನಾಯಕ ಅಡ್ವೊಕೇಟ್ ಎಸ್.ಪಿ. ದೀಪಕ್ ಅವರು 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ದೇವನಾಮದಲ್ಲಿ ಅಥವಾ ಕೇರಳ ಮುನ್ಸಿಪಾಲಿಟಿ ಕಾಯ್ದೆ 1994ರ ಸೆಕ್ಷನ್ 143ರ ಅಡಿಯಲ್ಲಿ ಕಡ್ಡಾಯಗೊಳಿಸಿರುವಂತೆ ಪ್ರಾಮಾಣಿಕವಾಗಿ ದೃಢೀಕರಿಸಿ ಪ್ರಮಾಣ ವಚನ ಸ್ವೀಕರಿಸುವ ಬದಲಾಗಿ, ವಿವಿಧ ದೇವತೆಗಳು, ಹುತಾತ್ಮರು, ರಾಜಕೀಯ ಚಳುವಳಿಗಳು ಮತ್ತು ರಾಜಕೀಯ ನಾಯಕರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಪ್ರಮಾಣ ವಚನವು ಸಂವಿಧಾನಕ್ಕೆ ಬದ್ಧವಾಗಿರಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕಾಗಲಿ ಅಥವಾ ಅದರ ಹುತಾತ್ಮರಿಗಾಗಲಿ ಅಲ್ಲ ಎಂದು ವಾದಿಸಿದ್ದರು. ಆದ್ದರಿಂದ ಈ ರೀತಿಯ ಪ್ರಮಾಣ ವಚನಗಳು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ನಿರ್ದೇಶನಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರ ಹೇಳಿದ್ದರು.

ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಯೋಜನವು ಪ್ರತಿವಾದಿ-ಕೌನ್ಸಿಲರ್‌ಗಳಿಗೆ ಇಂದಿನವರೆಗೆ (ಜೂ.24) ಲಭ್ಯವಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಕಾರ, ಕೌನ್ಸಿಲ್‌ನ ರಚನೆಯಲ್ಲಿನ ಯಾವುದೇ ನ್ಯೂನತೆ, ಖಾಲಿ ಹುದ್ದೆ, ಅಕ್ರಮ ಅಥವಾ ವ್ಯಕ್ತಿಯೊಬ್ಬರ ಚುನಾವಣೆಯಲ್ಲಿನ ಕಾನೂನುಬಾಹಿರತೆಯ ಕಾರಣಕ್ಕಾಗಿ ಮಾತ್ರ ಮುನ್ಸಿಪಾಲಿಟಿ ಕೌನ್ಸಿಲ್, ಸ್ಥಾಯಿ ಸಮಿತಿ ಅಥವಾ ಇತರ ಯಾವುದೇ ಸಮಿತಿಯ ಯಾವುದೇ ಕಾಯ್ದೆ ಅಥವಾ ನಡಾವಳಿಗಳು ಅಸಿಂಧುಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಗ್ರಾಮ ಪಂಚಾಯತ್ ಸದಸ್ಯನ ಪ್ರಮಾಣವಚನವೂ ಅಸಿಂಧು

ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಪ್ರಮಾಣ ವಚನವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ಸಹ ನ್ಯಾಯಾಲಯವು ಪರಿಶೀಲನೆ ನಡೆಸಿದೆ.

ಪಂಚಾಯತ್ ರಾಜ್ ಕಾಯ್ದೆಯಡಿ ನಿಗದಿಪಡಿಸಿದ ನಮೂನೆಯು ಕೇವಲ ಎರಡು ಆಯ್ಕೆಗಳನ್ನು ಮಾತ್ರ ನೀಡುತ್ತದೆ; ಅವುಗಳೆಂದರೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದು ಅಥವಾ ಪ್ರಾಮಾಣಿಕವಾಗಿ ದೃಢೀಕರಿಸುವುದು ಎಂದು ನ್ಯಾಯಾಲಯವು ಹೇಳಿದೆ. ನಿಗದಿಪಡಿಸಿದ ನಮೂನೆಯಿಂದ ಯಾವುದೇ ರೀತಿಯಲ್ಲಿ ವಿಚಲಿತರಾಗುವುದು ಶಾಸನಬದ್ಧ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಆ ಸದಸ್ಯನ ಪ್ರಮಾಣ ವಚನವನ್ನು ಸಹ ಅಸಿಂಧು ಎಂದು ಘೋಷಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಗೆ ಭಿನ್ನವಾಗಿ, ಪಂಚಾಯತ್ ರಾಜ್ ಕಾಯ್ದೆಯು ಪ್ರಮಾಣ ವಚನ ಅಸಿಂಧುಗೊಂಡ ಸದಸ್ಯರು ಕೈಗೊಂಡ ಕ್ರಮಗಳನ್ನು ರಕ್ಷಿಸುವ ಯಾವುದೇ ನಿಬಂಧನೆಯನ್ನು ಹೊಂದಿಲ್ಲ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಇದರ ಪರಿಣಾಮವಾಗಿ, ತೀರ್ಪು ಬಂದ ದಿನಾಂಕದವರೆಗೆ ಪ್ರತಿವಾದಿಯು ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರಾಗಿ ನಿರ್ವಹಿಸಿದ ಎಲ್ಲಾ ಕಾರ್ಯಗಳು ಅಸಿಂಧು ಎಂದು ನ್ಯಾಯಾಲಯವು ತೀರ್ಪು ನೀಡಿದೆ; ಆದಾಗ್ಯೂ, ನೀಡಲಾದ ಸಮಯದೊಳಗೆ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅವರು ತಮ್ಮ ಸ್ಥಾನವನ್ನು ಕ್ರಮಬದ್ಧಗೊಳಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ.









ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...