Homeಮುಖಪುಟಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರಿಗೆ ಜಾಮೀನು ಮಂಜೂರು ಮಾಡುವ ಆದೇಶದಲ್ಲಿ ಅಸ್ಸಾಂ ಪೊಲೀಸರ ಕುರಿತು ಬಾರ್ಪೇಟಾ ನ್ಯಾಯಾಲಯವು ನೀಡಿರುವ ಹೇಳಿಕೆಗಳಿಗೆ ಗುವಾಹಟಿ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಮೋದಿಯವರನ್ನು ಟೀಕಿಸಿದ ಟ್ವೀಟ್‌ ಆಧರಿಸಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ದೊರೆತ ಮರುಗಳಿಗೆಯೇ ಜಿಗ್ನೇಶ್ ಅವರನ್ನು ಮತ್ತೆ ಬಂಧಿಸಲಾಯಿತು. ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಮೇವಾನಿ ಮೇಲೆ ಹೊರಿಸಲಾಗಿತ್ತು. ಎರಡನೇ ಪ್ರಕರಣದ ಜಾಮೀನು ಅರ್ಜಿಯನ್ನು ವಿಚಾರಿಸಿದ್ದ ಬಾರ್ಪೇಟಾ ನ್ಯಾಯಾಲಯ ಪೊಲೀಸ್ ಪಡೆಯನ್ನು ಕಟುವಾಗಿ ಟೀಕಿಸಿತ್ತು. “ನಕಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ರಾಜ್ಯದ ಪೊಲೀಸ್‌ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿತ್ತು. ಈ ಅಭಿಪ್ರಾಯಗಳಿಗೆ ಈಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೆಳ ನ್ಯಾಯಾಲಯವು ತನ್ನ ಮಿತಿಯನ್ನು ಮೀರಿದೆ. ಪೊಲೀಸ್ ಪಡೆ ಮತ್ತು ಅಸ್ಸಾಂ ಸರ್ಕಾರವನ್ನು ನಿರುತ್ಸಾಹಗೊಳಿಸಿದೆ” ಎಂದು ಹೈಕೋರ್ಟ್ ಅಭಿಪ್ರಾಯ ತಾಳಿದೆ.

ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಅವರು ಮಾಡಿರುವ ಅವಲೋಕನಗಳನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇಬಾಶಿಸ್ ಬರುವಾ, “ದಲಿತ ನಾಯಕ ಮತ್ತು ಸ್ವತಂತ್ರ ಶಾಸಕರಾದ ಮೇವಾನಿ ಅವರಿಗೆ ಜಾಮೀನು ನೀಡಿರುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಲಿಲ್ಲ” ಎಂದು ವರದಿ ಹೇಳಿದೆ.

ಜಾಮೀನು ನೀಡುವ ವೇಳೆ ಹೈಕೋರ್ಟ್‌ಗೆ ಮನವಿ ಮಾಡಿದ್ದ ಬಾರ್ಪೇಟಾ ಜಿಲ್ಲಾ ಕೋರ್ಟ್, “ಆರೋಪಿಯ ವಿರುದ್ಧ ಈ ರೀತಿಯ ಸುಳ್ಳು ಪ್ರಕರಣ ದಾಖಲಿಸುವ ಪ್ರವೃತ್ತಿ ನಿತ್ಯವೂ ನಡೆಯುತ್ತಿದ್ದು, ಇವುಗಳನ್ನು ತಡೆಯಲು ಅಸ್ಸಾಂ ಪೊಲೀಸರಿಗೆ ನಿರ್ದೇಶನವನ್ನು ನೀಡಬೇಕು” ಎಂದು ಕೋರಿತ್ತು.

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ತಿಳಿಸಿತ್ತು.

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

ಆದರೆ ಈ ಅಭಿಪ್ರಾಯಗಳು ಕೆಳ ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿವೆ ಎಂದು ನ್ಯಾಯಮೂರ್ತಿ ಬರುವಾ ತಿಳಿಸಿದ್ದಾರೆ.

ರಜೆಯ ಕಾರಣ ಸೋಮವಾರ ನ್ಯಾಯಾಲಯವನ್ನು ಮುಚ್ಚಿದ್ದರಿಂದ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ವಿಶೇಷ ಅನುಮತಿ ಪಡೆದರು.

ಇದನ್ನೂ ಓದಿರಿ: ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಮೇವಾನಿಯನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 19 ರಂದು ಗುಜರಾತ್‌ನ ಪಾಲನ್‌ಪುರ್ ಪಟ್ಟಣದಿಂದ ಬಂಧಿಸಿದ್ದು, ಕೊಕ್ರಜಾರ್‌ನಲ್ಲಿ ಅವರ ವಿರುದ್ಧ ಪ್ರಧಾನಿಯವರ ಟ್ವೀಟ್‌ಗಾಗಿ ಎಫ್‌ಐಆರ್ ದಾಖಲಾಗಿತ್ತು. ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ, “ಜಿಗ್ನೇಶ್‌ ಮೇವಾನಿ ನನ್ನನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ಎಫ್‌ಐಆರ್ ಪ್ರಕಾರ, “ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು”.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ರೂಪಿಸಲ್ಪಟ್ಟಿದೆ” ಎಂದು ತಿಳಿಸಿದೆ.

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...