Homeಮುಖಪುಟಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿ, ನಂದಿಗ್ರಾಮ ಪ್ರಕರಣದಿಂದ ಹಿಂದೆ ಸರಿದ ಜಸ್ಟಿಸ್...

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿ, ನಂದಿಗ್ರಾಮ ಪ್ರಕರಣದಿಂದ ಹಿಂದೆ ಸರಿದ ಜಸ್ಟಿಸ್ ಕೌಶಿಕ್ ಚಂದಾ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸುವೇಂದು ಅಧಿಕಾರಿಯ ಗೆಲುವು ಪ್ರಶ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸಲಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರನ್ನು ಬದಲಾಯಿಸುವಂತೆ ಮಮತಾ ಬ್ಯಾನಜಿ ಅರ್ಜಿ ಸಲ್ಲಿಸಿದ್ದರು.

ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿರುವ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ನ್ಯಾಯಮೂರ್ತಿ ಕೌಶಿಕ್‌ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು  ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರ ನ್ಯಾಯಪೀಠದಿಂದ ಪ್ರಕರಣವನ್ನು ವರ್ಗಾಯಿಸುವಂತೆ ಮಮತಾ ಬ್ಯಾನರ್ಜಿ ಅವರ ವಕೀಲರು ಮನವಿ ಮಾಡಿದ್ದರು.

ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

“ಪ್ರಕರಣದ ವಿಚಾರಣೆಗೆ ಮುಂಚೆಯೇ ನನ್ನ ನಿರ್ಧಾರದ ಮೇಲೆ ಪರಿಣಾಮ ಬೀರಲು ಉದ್ದೇಶಪೂರ್ವಕ ಮತ್ತು ಸಂಪೂರ್ಣ ಪ್ರಯತ್ನ ಮಾಡಲಾಯಿತು. ಇಂತಹ ಲೆಕ್ಕಾಚಾರ, ಮಾನಸಿಕ ಮತ್ತು ಆಕ್ರಮಣಕಾರಿ ಪ್ರಯತ್ನವನ್ನು ಹಿಮ್ಮೆಟ್ಟಿಸಬೇಕಾಗಿದೆ” ಎಂದು ಹೇಳಿದ್ದಾರೆ. ಜೊತೆಗೆ ಅರ್ಜಿದಾರರಾದ ಮಮತಾ ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಕೌಶಿಕ್ ಚಂದಾ ತಿಳಿಸಿದ್ದಾರೆ.

ನಂದಿಗ್ರಾಮ ಫಲಿತಾಂಶದ ಅರ್ಜಿ ವಿಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದಾಗೆ ನೀಡಿದ್ದಕ್ಕೆ, ನ್ಯಾಯಮೂರ್ತಿ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಕಾನೂನು ಸಲಹೆಗಾರರಾಗಿದ್ದ ಕೌಶಿಕ್ ಚಂದ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರ ಮುಂದೆ ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಚುನಾವಣೆ ಫಲಿತಾಂಶದ ಅರ್ಜಿ ಇದೆ ಎಂದು ಟಿಎಂಸಿ ನಾಯಕರು ಟ್ವೀಟ್ ಮಾಡಿದ್ದರು.

ಬಿಜೆಪಿಯ ಕಾನೂನು ವಿಭಾ‌ಗದ ಸದಸ್ಯ ಮತ್ತು ವಕೀಲರಾಗಿದ್ದ ಜಸ್ಟೀಸ್ ಕೌಶಿಕ್ ಚಂದಾ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮದ ಅರ್ಜಿ ವಿಚಾರಣೆಯನ್ನು ನಡೆಸಲಿದ್ದಾರೆ. ನಮ್ಮ ನ್ಯಾಯಾಂಗವನ್ನು ಉಳಿಸಿ ಎಂದು ಟಿಎಂಸಿ ಸಂಸದೆ ಮಹುವಾ ಮೊಹಿತ್ರಾ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...