Homeಮುಖಪುಟತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ “ಅನರ್ಹ” ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಮುಂಬರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಕಣಕ್ಕಿಳಿಯಲು ಅನುಕೂಲವಾಗುವಂತೆ, ಅವರ ಫಿಟ್‌ನೆಸ್ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, “ತಾಯ್ತನದ ರಜೆಯ (Maternity Break) ನಂತರ ಕಣಕ್ಕೆ ಮರಳುತ್ತಿರುವ ಫೋಗಟ್ ಅವರನ್ನು ಸ್ಪರ್ಧಿಸದಂತೆ ತಡೆಯುತ್ತಿರುವುದು ಎಷ್ಟು ಸರಿ?” ಎಂದು ಒಕ್ಕೂಟವನ್ನು ಪ್ರಶ್ನಿಸಿದೆ. “ನಮ್ಮ ದೇಶದಲ್ಲಿ ತಾಯ್ತನವನ್ನು ಸಂಭ್ರಮಿಸಲಾಗುತ್ತದೆ, ಹಾಗಿರುವಾಗ ಅದು ಒಬ್ಬ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಮಾರಕವಾಗಬೇಕೇ?” ಎಂದು ಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಏಕಸದಸ್ಯ ಪೀಠದ ಆದೇಶದ ವಿರುದ್ಧ ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸುವಾಗ ಹೈಕೋರ್ಟ್ ಈ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೆ ಪ್ರಸಿದ್ಧ ಅಥ್ಲೀಟ್‌ಗಳಿಗೆ ನಿಯಮಗಳಲ್ಲಿ ವಿನಾಯಿತಿ ನೀಡುತ್ತಿದ್ದ ಕುಸ್ತಿ ಒಕ್ಕೂಟ, ಈಗ ವಿನೇಶ್ ಅವರ ವಿಷಯದಲ್ಲಿ ದಿಢೀರನೆ ನಿಯಮ ಬದಲಿಸಿರುವುದಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಹಳೆಯ ನಿಯಮಗಳನ್ನು ಗಾಳಿಗೆ ತೂರಿ ಈ ರೀತಿ ನಡೆದುಕೊಳ್ಳುತ್ತಿರುವುದು ನಿಮ್ಮ ಉದ್ದೇಶವನ್ನು ಎದ್ದು ತೋರಿಸುತ್ತದೆ. ಕ್ರೀಡಾ ಸಂಸ್ಥೆಯಾಗಿ ಈ ರೀತಿ ವರ್ತಿಸಬೇಡಿ, ಇದು ಕ್ರೀಡಾ ಜಗತ್ತಿಗೆ ಒಳ್ಳೆಯದಲ್ಲ. ಒಕ್ಕೂಟವು ಯಾವುದೇ ಕ್ರೀಡಾಪಟುವಿನ ವಿರುದ್ಧ ‘ಸೇಡಿನ ರಾಜಕಾರಣ’ ಮಾಡಬಾರದು” ಎಂದು ನ್ಯಾಯಾಲಯ ಎಚ್ಚರಿಸಿದೆ.

ಮೇ 30 ಮತ್ತು 31 ರಂದು ನಡೆಯಲಿರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಿನೇಶ್ ಫೋಗಟ್ ಭಾಗವಹಿಸಲು ಅವಕಾಶ ಸಿಗುವಂತೆ ನೋಡಿಕೊಳ್ಳಿ ಎಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ, ಅವರ ದೈಹಿಕ ಸಾಮರ್ಥ್ಯ ಮತ್ತು ಸಿದ್ಧತೆಯನ್ನು ಅಳೆಯಲು ತಜ್ಞರ ಸಮಿತಿಯನ್ನು ರಚಿಸಲು ತಿಳಿಸಿದೆ. “ತಜ್ಞರ ಮೂಲಕ ಅವರ ಅವಕಾಶಗಳನ್ನು ಮರುಪರಿಶೀಲಿಸಿ… ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಿ” ಎಂದು ಪೀಠವು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.

ವಿಶೇಷ ಸಂದರ್ಭಗಳಲ್ಲಿ ಅರ್ಹತಾ ನಿಯಮಗಳನ್ನು ಸಡಿಲಿಸಲು ‘ಭಾರತೀಯ ಕ್ರೀಡಾ ಪ್ರಾಧಿಕಾರ’ದ (SAI) ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದು ಇದೇ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತು.

ಕಣದಿಂದ ಹೊರದೂಡಲು ಸಂಚು?

ಜೂನ್ 26, 2026 ರವರೆಗೆ ತಮ್ಮನ್ನು ದೇಶೀಯ ಕೂಟಗಳಿಂದ ಅನರ್ಹಗೊಳಿಸಿರುವ ಕುಸ್ತಿ ಒಕ್ಕೂಟದ ನಿರ್ಧಾರವನ್ನು ವಿನೇಶ್ ಫೋಗಟ್ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ನಿವೃತ್ತಿ ಪಡೆದು ಮತ್ತೆ ಕಣಕ್ಕೆ ಮರಳುವ ಅಥ್ಲೀಟ್‌ಗಳು ಕಡ್ಡಾಯವಾಗಿ ಆರು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕು” ಎಂಬ ಉದ್ದೀಪನ ಮದ್ದು ತಡೆ (Anti-doping) ನಿಯಮವನ್ನು ಒಕ್ಕೂಟ ನೆಪವಾಗಿ ಮುಂದಿಟ್ಟಿತ್ತು.

ಆದರೆ ವಿನೇಶ್ ಪರ ವಕೀಲರು, “ಇದು ವಿನೇಶ್ ಅವರು ಮತ್ತೆ ಕುಸ್ತಿ ಅಖಾಡಕ್ಕೆ ಇಳಿಯಬಾರದು ಎಂಬ ಏಕೈಕ ಉದ್ದೇಶದಿಂದ ಮಾಡಿರುವ ಸಂಚು” ಎಂದು ವಾದಿಸಿದರು. ಮೇ 10 ರಂದು ಗೊಂಡಾದಲ್ಲಿ ನಡೆದ ದೇಶೀಯ ಪಂದ್ಯಾವಳಿಯಲ್ಲಿ ವಿನೇಶ್ ಭಾಗವಹಿಸುವ ಕೇವಲ ಒಂದು ದಿನ ಮುಂಚೆ, ಅಂದರೆ ಮೇ 9 ರಂದು ಅವರಿಗೆ ಒಕ್ಕೂಟವು ಕಾರಣ ಕೇಳಿ ನೋಟಿಸ್ ನೀಡಿತ್ತು. ಇದನ್ನು ಉಲ್ಲೇಖಿಸಿದ ವಕೀಲರು, “ಅವರನ್ನು ಹೇಗಾದರೂ ಮಾಡಿ ಹೊರದಬ್ಬಲು ಯಾರೋ ಇಲ್ಲದ ಕಾರಣಗಳನ್ನು ಹುಡುಕುತ್ತಿದ್ದಾರೆ” ಎಂದು ವಾದ ಮಂಡಿಸಿದರು.

ಇನ್ನು, ಕುಸ್ತಿ ಒಕ್ಕೂಟ ನೀಡಿದ್ದ ನೋಟಿಸ್‌ನಲ್ಲಿ ಬಳಸಲಾಗಿದ್ದ ಪದಗಳ ಬಗ್ಗೆಯೂ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದನ್ನು ಒಕ್ಕೂಟವು ತನ್ನ ನೋಟಿಸ್‌ನಲ್ಲಿ “ರಾಷ್ಟ್ರೀಯ ಅವಮಾನ” ಎಂದು ಕರೆದಿತ್ತು. “ವಿನೇಶ್ ಅವರನ್ನೇ ಗುರಿಯಾಗಿಸಿಕೊಂಡು ನೀವು ನಿಯಮಗಳನ್ನು ಬದಲಾಯಿಸಿದ್ದೀರಿ ಎಂದು ನಾವು ಯಾಕೆ ಭಾವಿಸಬಾರದು?” ಎಂದು ಪೀಠವು ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡಿತು.

ಹೋರಾಟದ ಹಿನ್ನೆಲೆ

ಜುಲೈ 2025 ರಲ್ಲಿ ಮಗುವಿಗೆ ಜನ್ಮ ನೀಡಿದ್ದ ವಿನೇಶ್ ಫೋಗಟ್, ಇತ್ತೀಚೆಗಷ್ಟೇ ಮತ್ತೆ ತರಬೇತಿ ಆರಂಭಿಸಿದ್ದರು. ಒಕ್ಕೂಟದ ನಿಷೇಧದ ಆದೇಶದ ನಡುವೆಯೂ ಅವರು ಗೊಂಡಾದಲ್ಲಿ ನಡೆದ ನ್ಯಾಷನಲ್ ಓಪನ್ ರ‍್ಯಾಂಕಿಂಗ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದರು.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿನೇಶ್ ಫೋಗಟ್ ಅತ್ಯಂತ ಪ್ರಭಾವಶಾಲಿ ಹೆಸರುಗಳಲ್ಲಿ ಒಂದು. 2023 ರಲ್ಲಿ ಭಾರತೀಯ ಕುಸ್ತಿ ಒಕ್ಕೂಟದ ಅಂದಿನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಮಹಿಳಾ ಕುಸ್ತಿಪಟುಗಳ ಪರವಾಗಿ ದೆಹಲಿಯ ರಸ್ತೆಯಲ್ಲಿ ಹೋರಾಟದ ಮುಂಚೂಣಿಯಲ್ಲಿದ್ದ ಧೀಮಂತ ಮಹಿಳೆ ಈ ವಿನೇಶ್.

ಕಳೆದ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಫೈನಲ್ ತಲುಪಿದ್ದ ವಿನೇಶ್, ಅಂತಿಮ ಪಂದ್ಯದ ದಿನ ಬೆಳಗ್ಗೆ ಕೇವಲ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ದುರದೃಷ್ಟವಶಾತ್ ಅನರ್ಹಗೊಂಡಿದ್ದರು. ಇದು ಇಡೀ ದೇಶದ ಕ್ರೀಡಾಭಿಮಾನಿಗಳಿಗೆ ಭಾರಿ ಆಘಾತ ನೀಡಿತ್ತು. ಆದರೆ ಈಗ ಕೋರ್ಟ್ ನೀಡಿರುವ ಈ ಆದೇಶ ಅವರ ಮುಂದಿನ ಒಲಿಂಪಿಕ್ಸ್ ಮತ್ತು ಏಷ್ಯನ್ ಗೇಮ್ಸ್ ಕನಸಿಗೆ ಮತ್ತೆ ಮರುಜೀವ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...