Homeಕರ್ನಾಟಕರೇಣುಕಸ್ವಾಮಿ ಕೊಲೆ ಪ್ರಕರಣ : ಚಾರ್ಜ್‌ಶೀಟ್‌ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

ರೇಣುಕಸ್ವಾಮಿ ಕೊಲೆ ಪ್ರಕರಣ : ಚಾರ್ಜ್‌ಶೀಟ್‌ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

- Advertisement -
- Advertisement -

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರರ ವಿರುದ್ದ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಗಳನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಆದೇಶಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ಏಕಸದಸ್ಯ ಪೀಠ, ನಿರ್ಬಂಧ ವಿಧಿಸಿದ ಆದೇಶ ಹೊರಡಿಸಿದೆ.

ಸಿದ್ಧಾರ್ಥ ವಶಿಷ್ಟ್ @ ಮನು ಶರ್ಮಾ VS ರಾಜ್ಯ (ದೆಹಲಿ ಎನ್‌ಸಿಟಿ)- 2010ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಶನ್ ಆಕ್ಟ್- 1995ರ ಷರತ್ತು 5 ಮತ್ತು ಹೈಕೋರ್ಟ್‌ನ ಸಮನ್ವಯ ಪೀಠದ ತೀರ್ಪುಗಳನ್ನು ಉಲ್ಲೇಖಿಸಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಈ ಆದೇಶವನ್ನು ಮಾಧ್ಯಮ ಸಂಸ್ಥೆಗಳಿಗೆ ತಿಳಿಸುವಂತೆ ಮತ್ತು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಜೂನ್ 11, 2024 ರಂದು ಬಂಧಿಸಲಾಗಿದ್ದು, ಜೂನ್ 22 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಅರ್ಜಿದಾರರ ಪರ ವಕೀಲೆ ರೇಷ್ಮಾ ಕೆ ಟಿ, ಹಿರಿಯ ವಕೀಲ ಪ್ರಭುಲಿಂಗ ಕೆ ನಾವದಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದನ್ನೂ ಓದಿ : ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ರಮೇಶ್ ಜಾರಕಿಹೊಳಿ ಪ್ರಕರಣಗಳ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...