ಮಹಿಳೆ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ ಆರೋಪ ಪ್ರಕರಣದಲ್ಲಿ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಡಿಸೆಂಬರ್ 15ರವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಶನಿವಾರ (ಡಿಸೆಂಬರ್ 6) ಪೊಲೀಸರಿಗೆ ನಿರ್ಬಂಧ ವಿಧಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬಂದಾಗ, ನ್ಯಾಯಮೂರ್ತಿ ಕೆ. ಬಾಬು ಅವರು ಈ ವಿಷಯವನ್ನು ವಿವರವಾದ ವಿಚಾರಣೆಗೆ ಮುಂದೂಡುವುದಾಗಿ ಹೇಳಿದ್ದಾರೆ. “ಪ್ರಕರಣದ ವಿಚಾರಣೆಯ ಸಮಯದಲ್ಲಿ, ಅರ್ಜಿದಾರರು ಗಂಭೀರವಾದ ವಾದಗಳನ್ನು ಎತ್ತಿರುವುದರಿಂದ ಅವರನ್ನು ಬಂಧಿಸಲು ನಾನು ಪೊಲೀಸರಿಗೆ ಅವಕಾಶ ನೀಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಯಾವುದೇ ವ್ಯಕ್ತಿ ತಪ್ಪಿತಸ್ಥರು ಎಂದು ಸಾಬೀತಾಗುವವರೆಗೆ ಅವರನ್ನು ಶಿಕ್ಷಿಸಲು ಸಾಧ್ಯವಿಲ್ಲ. ಸಾಂವಿಧಾನಿಕ ನ್ಯಾಯಾಲಯದ ಮುಂದೆ ಪ್ರಕರಣ ಬಾಕಿ ಇರುವಾಗ ಅವರನ್ನು ಬಂಧಿಸಲಾಗುವುದಿಲ್ಲ. ನಮ್ಮ ನಡುವೆ ಒಪ್ಪಿತ ಸಂಬಂಧ ಇತ್ತು ಎಂದು ಅರ್ಜಿದಾರರು ಹೇಳಿದ್ದಾರೆ. ಹಾಗಾಗಿ, ನಾನು ಯಾವುದೇ ಪೂರ್ವಾಗ್ರಹ ಪೀಡತನಾಗುವುದಿಲ್ಲ ಎಂದು ನ್ಯಾಯಮೂರ್ತಿ ಕೆ. ಬಾಬು ಹೇಳಿದ್ದಾರೆ.


