Homeಮುಖಪುಟ'ದೆಹಲಿ ಗಲಭೆ' ಕುರಿತ ಸಿನಿಮಾ ಬಿಡುಗಡೆಗೆ ತಡೆಕೋರಿ ಶರ್ಜೀಲ್ ಇಮಾಮ್ ಅರ್ಜಿ : ಸರ್ಕಾರದ ಪ್ರತಿಕ್ರಿಯೆ...

‘ದೆಹಲಿ ಗಲಭೆ’ ಕುರಿತ ಸಿನಿಮಾ ಬಿಡುಗಡೆಗೆ ತಡೆಕೋರಿ ಶರ್ಜೀಲ್ ಇಮಾಮ್ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೋರಿದ ಕೋರ್ಟ್

- Advertisement -
- Advertisement -

ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಯ ಕುರಿತಾದ ಚಲನಚಿತ್ರ ‘2020 ಡೆಲ್ಲಿ’ ಬಿಡುಗಡೆಯನ್ನು ಮುಂದೂಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಶರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗುರುವಾರ (ಜ.30) ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ(ಸಿಬಿಎಫ್‌ಸಿ) ಪ್ರತಿಕ್ರಿಯೆ ಕೋರಿದೆ ಎಂದು ಪಿಟಿಐ ವರದಿ ಮಾಡಿದೆ.

ನ್ಯಾಯಾಲಯ ದೆಹಲಿ ಪೊಲೀಸರು ಮತ್ತು ಚಿತ್ರದ ನಿರ್ಮಾಪಕರಿಗೂ ನೋಟಿಸ್ ಜಾರಿ ಮಾಡಿದೆ ಎಂದು ವರದಿ ಹೇಳಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿ, ಪ್ರಸ್ತುತ ಶರ್ಜೀಲ್ ಇಮಾಮ್ ಅವರನ್ನು ಜೈಲಿನಲ್ಲಿಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ವಿರುದ್ಧ ನಡೆದಿದ್ದ ಪ್ರತಿಭಟನೆ ಮತ್ತು ನಂತರ ನಡೆದ ಗಲಭೆಗಳನ್ನು ಆಧರಿಸಿದ ‘2020 ಡೆಲ್ಲಿ’ ಚಿತ್ರ ನಿರ್ಮಿಸಲಾಗಿದೆ. ಶನಿವಾರ (ಜ.1) ಅದು ಬಿಡುಗಡೆಯಾಗಲಿದೆ.

ಸಿನಿಮಾದ ಚಿತ್ರಕಥೆಗಾರ ಮತ್ತು ನಿರ್ದೇಶಕ ದೇವೇಂದ್ರ ಮಾಲ್ವಿಯಾ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ಚಿತ್ರವು ತನ್ನ ಪ್ರಕರಣದಲ್ಲಿ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ಮಾತ್ರವಲ್ಲದೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಲವಾರು ವಿಚಾರಣೆ ಮತ್ತು ಜಾಮೀನು ಅರ್ಜಿಗಳ ಮೇಲೂ ಪರಿಣಾಮ ಬೀರಬಹುದು ಎಂದು ಶರ್ಜೀಲ್ ಇಮಾಮ್ ಕಳವಳ ವ್ಯಕ್ತಪಡಿಸಿದ್ದಾರೆ.

“ಸುಳ್ಳು, ಕಲ್ಪಿತ ಮತ್ತು ಕಾಲ್ಪನಿಕ ಕಥೆ ಹೊಂದಿರುವ ಚಿತ್ರವನ್ನು ನಿಜವಾದ ಘಟನೆಗಳನ್ನು ಆಧರಿಸಿ ನಿರ್ಮಿಸಲಾಗಿದೆ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ತನ್ನನ್ನು ಭಯೋತ್ಪಾದಕ ಅಥವಾ ದೇಶದ್ರೋಹಿ ಎಂದು ತಪ್ಪಾಗಿ ಬ್ರಾಂಡ್ ಮಾಡುವ ಈ ಚಿತ್ರವು ಖಂಡಿತವಾಗಿಯೂ ಇನ್ನೂ ಪ್ರಾರಂಭಗೊಳ್ಳದ ವಿಚಾರಣೆಯ ಮೇಲೆ ಗಂಭೀರ ಪೂರ್ವಾಗ್ರಹ ಪೀಡಿತ ಪರಿಣಾಮ ಬೀರುತ್ತದೆ” ಎಂದು ಶರ್ಜೀಲ್ ಇಮಾಮ್ ವಾದಿಸಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ನ್ಯಾಯಾಲಯದ ತೀರ್ಪು ಬರುವ ಮುನ್ನವೇ ವ್ಯಕ್ತಿಗಳಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟುವುದು ನ್ಯಾಯಾಂಗದ ಪಕ್ಷಪಾತಕ್ಕೆ ಕಾರಣವಾಗಬಹುದು. ಅಲ್ಲದೆ, ಸಮಾನತೆ, ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸುವ ಸಂವಿಧಾನ 14 ಮತ್ತು 21 ನೇ ವಿಧಿಯ ವಿರುದ್ಧವೂ ಆಗುತ್ತದೆ ಎಂದು ಶರ್ಜೀಲ್ ಇಮಾಮ್ ಅರ್ಜಿಯಲ್ಲಿ ಹೇಳಿದ್ದಾರೆ.

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಈ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಮೃತರಲ್ಲಿ ಹೆಚ್ಚಿನವರು ಮುಸ್ಲಿಮರು.

ಈ ಹಿಂಸಾಚಾರವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದದ ದೊಡ್ಡ ಪಿತೂರಿಯ ಭಾಗವಾಗಿದ್ದು, ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರೇ ಗಲಭೆಯ ಹಿಂದಿನ ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....