Homeಮುಖಪುಟಜಾತಿ ಆಧಾರಿತ ಪಕ್ಷ, ಯೂಟ್ಯೂಬ್ ಚಾನೆಲ್‌ಗಳ ನಿಷೇಧ ಕೋರಿ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೇಳಿದ...

ಜಾತಿ ಆಧಾರಿತ ಪಕ್ಷ, ಯೂಟ್ಯೂಬ್ ಚಾನೆಲ್‌ಗಳ ನಿಷೇಧ ಕೋರಿ ಅರ್ಜಿ : ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

- Advertisement -
- Advertisement -

ಸಮಾಜದಲ್ಲಿ ದ್ವೇಷ ಹರಡುತ್ತಿರುವ ಜಾತಿ ಆಧಾರಿತ ರಾಜಕೀಯ ಪಕ್ಷ, ಸಂಘಟನೆ ಮತ್ತು ಯೂಟ್ಯೂಬ್ ಚಾನೆಲ್‌ ಇತ್ಯಾದಿಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬಂಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಶುಕ್ರವಾರ (ಜ.10) ತಮಿಳುನಾಡು ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.

ಚುನಾವಣಾ ಆಯೋಗದಲ್ಲಿ ಸರಿಯಾಗಿ ನೋಂದಣಿಯಾಗದ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸದ ಎಲ್ಲಾ ಜಾತಿ ಆಧಾರಿತ ರಾಜಕೀಯ ಪಕ್ಷಗಳು ಮತ್ತು ತಮಿಳುನಾಡು ಸಮಾಜ ನೋಂದಣಿ ಕಾಯ್ದೆಯ ಪ್ರಕಾರ ಕಾರ್ಯನಿರ್ವಹಿಸದ ಮತ್ತು ನಿಯಮಿತವಾಗಿ ತಮ್ಮ ವಾರ್ಷಿಕ ವರದಿಯನ್ನು ಸಲ್ಲಿಸದ ಎಲ್ಲಾ ಜಾತಿ ಆಧಾರಿತ ಸಂಘ, ಸಂಸ್ಥೆಗಳು ಮತ್ತು ಜಾತಿ ಆಧಾರಿತ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಬೇಕು ಎಂದು ಅರ್ಜಿದಾರ ಮಧುರೈನ ಸಿ ಸೆಲ್ವಕುಮಾರ್ ನ್ಯಾಯಾಲಯವನ್ನು ಕೋರಿದ್ದಾರೆ.

ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ರಚಿಸಲಾದ ಎಸ್‌ಸಿ/ಎಸ್‌ಟಿ ರಕ್ಷಣಾ ತಂಡವು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸೂಚನೆ ನೀಡುವಂತೆಯೂ ಅರ್ಜಿದಾರ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿಗಳಾದ ಎಂ.ಎಸ್. ರಮೇಶ್ ಮತ್ತು ಎ.ಡಿ. ಮಾರಿಯಾ ಕ್ಲೀಟ್ ಅವರನ್ನೊಳಗೊಂಡ ಪೀಠವು ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ಅವರಿಂದ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಕೋರಿದೆ. ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.

ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...