Homeಕರ್ನಾಟಕವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಹೇಳಿದೆ.

ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಪೀಠ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಚಳಿಗಾಲದ ರಜೆ ಮುಗಿದ ಬಳಿಕ ನಿಗದಿಪಡಿಸಲು ನಿರ್ದೇಶಿಸಿದೆ.

ವಿಚಾರಣೆ ವೇಳೆ ಹೋಟೆಲ್‌ ಸಂಘದ ಪರ ವಾದ ಮಂಡಿಸಿದ ವಕೀಲ ಬಿ ಕೆ ಪ್ರಶಾಂತ್‌, “ಕಾರ್ಮಿಕ ಇಲಾಖೆಯು 18 ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ. 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ಈ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ” ಎಂದರು.

ಮುಂದುವರಿದು, “ಆದರೆ, ಈ ಎಲ್ಲಾ ಕಾಯ್ದೆಗಳು ಈಗಾಲೇ ಸಮಗ್ರ ರಜೆ ನೀತಿಯನ್ನು ಹೊಂದಿವೆ. ಕಾರ್ಖಾನೆ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯದ ರಜೆ ನೀಡುತ್ತಿವೆ. ಇದರ ಜೊತೆಗೆ 12 ಸಾಮಾನ್ಯ ರಜೆಯೂ (ಕ್ಯಾಷುವಲ್‌ ಲೀವ್) ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದು ತಿಳಿಸಿದರು.

“ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುವುದು ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಪ್ರಶಾಂತ್‌ ಅವರು ‘ಇಲ್ಲ’ ಎಂದು ಉತ್ತರಿಸಿದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನವೆಂಬರ್ 12ರಂದು ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ ಎಂದು ಹೋಟೆಲ್‌ ಸಂಘ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...