Homeಕರ್ನಾಟಕ'ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12' ಮಾರಾಟಕ್ಕೆ ಹೈಕೋರ್ಟ್ ತಡೆ

‘ಕುವೆಂಪು ಸಮಗ್ರ ಸಾಹಿತ್ಯ ಸಂಪುಟ 12’ ಮಾರಾಟಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾಲಯವು ಕಾಪಿರೈಟ್ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಹಿರಿಯ ಸಾಹಿತಿ ಪುಸಕ್ತಮನೆ ಹರಿಹರಪ್ರಿಯ, ವಿವಿಯು ಹೊರತಂದಿರುವ 12 ಸಂಪುಟಗಳ ಕುವೆಂಪು ಸಮಗ್ರ ಸಾಹಿತ್ಯ ಸರಣಿ ಮಾರಾಟಕ್ಕೆ ತಡೆ ತಂದಿದ್ದಾರೆ.

ಕೃತಿಚೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ಕುವೆಂಪು ಸಮಗ್ರ ಸಾಹಿತ್ಯದ 12ನೇ ಸಂಪುಟದ ಮಾರಾಟಕ್ಕೆ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷೆನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಬುಧವಾರ (ಮಾ.17) ತಡೆಯಾಜ್ಞೆ ನೀಡಿದ್ದಾರೆ.

ಪುಸ್ತಕಮನೆ ಹರಿಹರಪ್ರಿಯ ಅವರು 1974ರಲ್ಲಿ ಸಂಪಾದಿಸಿದ್ದ ಕುವೆಂಪು ಪತ್ರಗಳು ಪುಸ್ತಕದಿಂದ ಕುವೆಂಪು ಅವರ 62 ಪತ್ರಗಳನ್ನು ಯಥಾವತ್ತಾಗಿ ಕನ್ನಡ ವಿಶ್ವವಿದ್ಯಾಲಯ ಕುವೆಂಪು ಸಮಗ್ರ ಸಾಹಿತ್ಯದ ಹನ್ನೆರಡನೇ ಸಂಪುಟದಲ್ಲಿ ಪ್ರಕಟಿಸಿದೆ ಎಂಬ ಆರೋಪವಿದೆ.

ಇದನ್ನೂ ಓದಿ: ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ಸ್ವಪ್ನಗಳ ಪಾತ್ರ

“ವಿಶ್ವವಿದ್ಯಾಲಯದ ಸಿಂಡಿಕೇಟ್‍ನ ಸದಸ್ಯರ ಗಮನಕ್ಕೆ ವಿಷಯ ತಂದರೂ ಪ್ರಯೋಜನವಾಗಿಲ್ಲ. ವಿಧಿಯಿಲ್ಲದೆ ನ್ಯಾಯಾಲಯದ ಮೊರೆ ಹೋಗಿರುವೆ. ನ್ಯಾಯಾಲಯದ ಆದೇಶ ಸ್ವಲ್ಪ ಸಮಾಧಾನ ತಂದಿದೆ. ವಿಶ್ವವಿದ್ಯಾಲಯ ಈಗಲಾದರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಹರಿಹರಪ್ರಿಯ ಹೇಳಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, “ಸಂಪುಟ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಂಪಿ ವಿಶ್ವವಿದ್ಯಾಲಯದ ಪ್ರಸಾರಂಗದ ನಿರ್ದೇಶಕರಾದ ಪ್ರಶಾಂತ್ ಮಾತನಾಡಿ, “ಮೊದಲನೆಯದಾಗಿ, ಇದು ಮಧ್ಯಂತರ ಆದೇಶವಾಗಿದೆ. ಇದು ಎರಡೂ ಕಡೆಯವರಿಗೆ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ಕೋರ್ಟ್ ಇಂತಹ ಆದೇಶ ಹೊರಡಿಸಿದೆ ಎಂದು ಭಾವಿಸಿದ್ದೇನೆ. ಆದರೆ ಅಂತಿಮ ತೀರ್ಪು ಬೇರೆಯೇ ಆಗಿರುವ ಸಾಧ್ಯತೆಯಿದೆ. ಎರಡನೆಯದಾಗಿ, ನಾವು ಈ ಸಂಪುಟದಲ್ಲಿ 250ಕ್ಕೂ ಹೆಚ್ಚು ಪತ್ರಗಳನ್ನು ಬಳಸಿಕೊಂಡಿದ್ದೇವೆ. ಅದರಲ್ಲಿ 62 ಪತ್ರಗಳ ಹಕ್ಕು ನನ್ನದು ಎಂದು ಹರಹರಪ್ರಿಯ ಅವರು ಹೇಳುತ್ತಿದ್ದಾರೆ. ಆದರೆ ಕುವೆಂಪು ಅವರ ಎಲ್ಲಾ ಬರಹಗಳಿಗೂ ನಿಜವಾದ ಹಕ್ಕುದಾರರು ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ಮತ್ತು ಕುವೆಂಪು ಅವರ ಮಗಳು ತಾರಿಣಿಗೆ ಸೇರಿದ್ದಾಗಿದೆ. ಹಾಗಾಗಿ ಈ ಪ್ರಕರಣದಲ್ಲಿ ಕೋರ್ಟ್‌ನ ಅಂತಿಮ ತೀರ್ಪು ಏನಾಗಲಿದೆ ಎಂದು ಕಾದುನೋಡಬೇಕಿದೆ” ಎಂದು ಹೇಳಿದರು.

ಕೆ.ಸಿ.ಶಿವಾರೆಡ್ಡಿ ಸಂಪಾದಕತ್ವದ ಕುವೆಂಪು ಸಮಗ್ರ ಸಾಹಿತ್ಯವನ್ನು 2020ರ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು. 12ನೆ ಸಂಪುಟಗಳಲ್ಲಿ ಪ್ರಕಟಿಸಿರುವ ಕುವೆಂಪು ಅವರ 62 ಪತ್ರಗಳೇ ಈಗ ವಿವಾದ ಸೃಷ್ಟಿಸಿವೆ.


ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...