Homeಕರ್ನಾಟಕಕಮಲ-ದಳ ಮೈತ್ರಿ: ಪುತ್ರರ ಜತೆಗೆ ಪ್ರಧಾನಿ ಮೋದಿ ಭೇಟಿಯಾದ ಹೆಚ್.ಡಿ. ದೇವೇಗೌಡ

ಕಮಲ-ದಳ ಮೈತ್ರಿ: ಪುತ್ರರ ಜತೆಗೆ ಪ್ರಧಾನಿ ಮೋದಿ ಭೇಟಿಯಾದ ಹೆಚ್.ಡಿ. ದೇವೇಗೌಡ

- Advertisement -
- Advertisement -

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷವು ಎನ್‌ಡಿಎ ಮೈತ್ರಿಕೂಟದ ಜತೆಗೆ ಅಧಿಕೃತವಾಗಿ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಭಾರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪುತ್ರರ ಜತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.

ನವ ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಮೋದಿಯನ್ನು ಭೇಟಿ ಮಾಡಲಾಗಿದ್ದು, ದೇವೇಗೌಡರ ಜತೆಗೆ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.‌ಬಾಲಕೃಷ್ಣ ಇದ್ದರು.

ಜೆಡಿಎಸ್ ನಾಯಕರ ಭೇಟಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ, ವಿಷಯಗಳ ಕುರಿತು ಅವರ ಆಲೋಚನೆ ಹಾಗೂ ಒಳನೋಟ ದೂರದೃಷ್ಠಿಯಿಂದ ಕೂಡಿದೆ’ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಭೇಟಿ ಕುರಿತು ಸಂಸತಸ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ. ಸಂಸತ್ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ. ಮಾನ್ಯ ಪ್ರಧಾನಮಂತ್ರಿಗಳು ನಮ್ಮ ಬಗ್ಗೆ ತೋರಿದ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಆಭಾರಿ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...