Homeಕರ್ನಾಟಕಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

- Advertisement -
- Advertisement -

ವನಸಿರಿ ನಾಡು ಎಂದೇ ಖ್ಯಾತವಾಗಿರುವ ಎಚ್.ಡಿ.ಕೋಟೆ ತಾಲ್ಲೂಕು ರಾಜಕೀಯವಾಗಿಯೂ ಗಮನ ಸೆಳೆಯುತ್ತದೆ. ನದಿ, ತೊರೆ, ಡ್ಯಾಮ್‌, ಕಾಡು, ಆದಿವಾಸಿಗಳು, ಕಾಡಂಚಿನ ಜನರು ವೈವಿಧ್ಯಮಯವಾಗಿ ಗಮನ ಸೆಳೆಯುವ ಎಚ್‌.ಡಿ.ಕೋಟೆ- ಸರಗೂರು ತಾಲ್ಲೂಕುಗಳನ್ನು ಒಳಗೊಂಡ ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರವು ಮೊದಲಿನಿಂದಲೂ ಜನತಾ ಪರಿವಾರ ಮತ್ತು ಕಾಂಗ್ರೆಸ್‌ನ ಭದ್ರಕೋಟೆ. ಈಗ ಬಿಜೆಪಿಯೂ ಇಲ್ಲಿ ನೆಲೆ ಕಾಣಲು ಯತ್ನಿಸುತ್ತಿದೆ. ಜೆಡಿಎಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಂ.ಕೃಷ್ಣನಾಯಕ ಬಿಜೆಪಿ ಸೇರಿದ ಮೇಲೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಹಾಲಿ ಶಾಸಕರಾಗಿರುವ ಅನಿಲ್‌ ಚಿಕ್ಕಮಾದು (ಸಿ.ಅನಿಲ್‌ಕುಮಾರ್‌) ಅವರು ಮಾಜಿ ಶಾಸಕ ಚಿಕ್ಕಮಾದು ಅವರ ಪುತ್ರ. ಜೆಡಿಎಸ್‌ನಲ್ಲಿ ಇದ್ದು ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಶಾಸಕರನ್ನಾಗಿ ಮಾಡುವಲ್ಲಿ ದಿವಂಗತ ಆರ್‌.ಧ್ರುವನಾರಾಯಣ್ ಅಂತಹ ನಾಯಕರ ಪಾತ್ರ ಮಹತ್ವದ್ದಾಗಿದೆ. ಈಗ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಎರಡನೇ ಅವಧಿಗೆ ಆಯ್ಕೆಯಾಗಲು ಸ್ಪರ್ಧಿಸಿದ್ದಾರೆ. ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್‌ ಅವರಿಗೆ ಜೆಡಿಎಸ್‌ ಟಿಕೆಟ್‌ ಸಿಕ್ಕಿದೆ. ಹೀಗಾಗಿ ಇಬ್ಬರು ಮಾಜಿ ಶಾಸಕರ ಪುತ್ರರ ಜೊತೆಗೆ ಕೃಷ್ಣ ನಾಯಕ ಅವರು ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ.

ಕೇರಳದ ಗಡಿಗೆ ಹೊಂದಿಕೊಂಡ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಜಲಾಶಯ (ಕಬಿನಿ, ನುಗು, ತಾರಕ) ಇದ್ದರೂ ಅನೇಕ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲ, ರಸ್ತೆಗಳು ಹಾಳಾಗಿವೆ, ಹಾಡಿಗಳು ಅಭಿವೃದ್ಧಿಯಾಗಿಲ್ಲ, ಆದಿವಾಸಿಗಳಿಗೆ ಸರಿಯಾದ ಪುನರ್‌ ವಸತಿ ಸಿಕ್ಕಿಲ್ಲ. ರೈತರಿಗೆ ಸಾಗುವಳಿ ಪತ್ರ ವಿತರಿಸುವಾಗ ಭ್ರಷ್ಟಚಾರ ಮಿತಿಮೀರಿದೆ- ಎಂಬಂತಹ ಗಂಭೀರ ಸಮಸ್ಯೆಗಳು ಕ್ಷೇತ್ರದಲ್ಲಿವೆ. ಹೀಗಾಗಿ ಹಾಲಿ ಶಾಸಕ ಅನಿಲ್ ಅವರಿಗೆ ಸವಾಲು ಎದರಾಗಿದೆ. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಜೊತೆಗಿದ್ದಾರೆ. ಜಾತಿವಾರು ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‌ ಜೊತೆಗಿವೆ. ಬಂಡಾಯವೆದ್ದವರು ಬೇರೆ ಪಕ್ಷಗಳಿಗೆ ಹೋಗಿ ಸೇರಿಕೊಂಡಿದ್ದಾರೆ. ಹೀಗಾಗಿ ಒಳೇಟು ಕೂಡ ಅನಿಲ್ ಅವರಿಗೆ ಇಲ್ಲವಾಗಿದೆ.

ಹಾಲಿ ಶಾಸಕ ಅನಿಲ್ ಚಿಕ್ಕಮಾದು

ಗಮನಾರ್ಹವಲ್ಲದಿದ್ದರೂ ಒಂದಿಷ್ಟು ಕೆಲಸಗಳನ್ನು ಅನಿಲ್ ಮಾಡಿದ್ದಾರೆಂಬ ಶ್ಲಾಘನೆಯೂ ಇದೆ. ಆದರೆ ಇವರಿಗೆ ಎದುರಾಗಿ ನಿಂತಿರುವ ಬಿಜೆಪಿ ಅಭ್ಯರ್ಥಿಯೂ ಗಮನಾರ್ಹ ಬೆಂಬಲಿಗರನ್ನು ಹೊಂದಿದ್ದಾರೆ ಎಂಬುದು ಕ್ಷೇತ್ರದ ಜನತೆಯ ಮಾತು.

2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದ ಬಳಿಕ ಎಚ್‌.ಡಿ.ಕೋಟೆಯು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲು ಕ್ಷೇತ್ರವಾಯಿತು. ಅದಕ್ಕೂ ಮುಂಚೆ ಹೆಚ್ಚು ಕಾಲ ಈ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಕ್ಷೇತ್ರದ ಒಳಗಿನವರಿಗೆ ಮತ್ತು ಹೊರಗಿನಿಂದ ಬಂದವರಿಗೂ ಇಲ್ಲಿನ ಜನತೆ ಮಣೆ ಹಾಕಿದ್ದಾರೆ. ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಕ್ಷೇತ್ರದ ರಾಜಕಾರಣದ ಏಳುಬೀಳು

ಉದ್ಯೋಗ ಅರಸಿ ಎಚ್.ಡಿ.ಕೋಟೆಗೆ ಬಂದಿದ್ದ ಕುಟುಂಬದ ಹಿನ್ನೆಲೆಯ ಪೀರಣ್ಣ ಮೂರು ಅವಧಿ ಶಾಸಕರಾಗಿ ಹ್ಯಾಟ್ರಿಕ್‌ ಭಾರಿಸಿದ್ದರು. ನಂತರ ಅವರ ಪುತ್ರ ಎಂ.ಪಿ.ವೆಂಕಟೇಶ್ ಎರಡು ಬಾರಿ ಗೆದ್ದಿದ್ದು ಇಲ್ಲಿನ ವಿಶೇಷ. ಹುಣಸೂರು ಕ್ಷೇತ್ರದವರಾದ ಚಿಕ್ಕಮಾದು ಇಲ್ಲಿಗೆ ವಲಸೆ ಬಂದು ಗೆದ್ದಿದ್ದರು. ಆನಂತರ ಅವರ ಪುತ್ರ  ಚಿಕ್ಕಮಾದು ಈಗ ಶಾಸಕರಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನವರೇ ಆದ ಎಂ.ಶಿವಣ್ಣ ಎರಡು ಬಾರಿ ಗೆದ್ದಿದ್ದರು. ಜೊತೆಗೆ ಎಸ್.ಎಂ.ಕೃಷ್ಣ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಬಿಜೆಪಿ ಸೇರಿಕೊಂಡಿದ್ದರೂ ಕ್ಷೇತ್ರದ ಮೇಲೆ ಅವರ ಪ್ರಭಾವ ಕಡಿಮೆಯಾಗಿದೆ. ಬಿಜೆಪಿಯಲ್ಲಿದ್ದರೂ ಮತದಾರರನ್ನು ಪ್ರಭಾವಿಸುವಷ್ಟು ಅವರೀಗ ಸಕ್ರಿಯವಾಗಿಲ್ಲ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಟಿ.ನರಸೀಪುರ: ಹಳೆ ಹುಲಿ ಮಹದೇವಪ್ಪ ಮತ್ತೆ ಪುಟಿದೇಳುವರೇ?

1952ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಎಚ್‌.ಡಿ.ಕೋಟೆಯು ಗುಂಡ್ಲುಪೇಟೆ ದ್ವಿಸದಸ್ಯ ಕ್ಷೇತ್ರವಾಗಿತ್ತು. 1957ರಲ್ಲಿ ನಡೆದ 2ನೇ ಚುನಾವಣೆಯಲ್ಲಿ ಹುಣಸೂರು ದ್ವಿಸದಸ್ಯ ಕ್ಷೇತ್ರವಾಯಿತು. 1962ರಲ್ಲಿ ಸ್ವತಂತ್ರ ಕ್ಷೇತ್ರವಾಗಿ ಮಾರ್ಪಟ್ಟು ಪರಿಶಿಷ್ಟ ಜಾತಿಗೆ ಮೀಸಲಾಯಿತು. 1962ರಲ್ಲಿ ಸ್ವತಂತ್ರ ಪಾರ್ಟಿಯ ಆರ್‌.ಪೀರಣ್ಣ ಕಾಂಗ್ರೆಸ್‌ನ ಎನ್.ರಾಚಯ್ಯ ವಿರುದ್ಧ ಜಯಭೇರಿ ಭಾರಿಸಿದರು. 1967ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆರ್.ಪೀರಣ್ಣ ಪುನರಾಯ್ಕೆಯಾದರು. 1972ರಲ್ಲಿ ಅವರು ಸಂಸ್ಥಾ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿ ‘ಹ್ಯಾಟ್ರಿಕ್‌ ಗೆಲುವು’ ಪಡೆದರು. 1983ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಎಚ್‌.ಬಿ.ಚಲುವಯ್ಯ, 1985ರಲ್ಲಿ ಕಾಂಗ್ರೆಸ್‌ನ ಎಂ.ಶಿವಣ್ಣ, 1989ರಲ್ಲಿ ಸಮಾಜವಾದಿ ಜನತಾ ಪಕ್ಷದ ಎಂ.ಪಿ.ವೆಂಕಟೇಶ್, 1994ರಲ್ಲಿ ಜನತಾದಳದ ಎನ್.ನಾಗರಾಜು, 1999ರಲ್ಲಿ ಮತ್ತೆ ಎಂ.ಶಿವಣ್ಣ, 2004ರ ಚುನಾವಣೆಯಲ್ಲಿ ಜೆಡಿಎಸ್‌ನ ಎಂ.ಪಿ.ವೆಂಕಟೇಶ್ ಶಾಸಕರಾಗಿ ಆಯ್ಕೆಯಾಗಿದ್ದರು.

2008ರಲ್ಲಿ ಎಸ್‌ಟಿ ಮೀಸಲು ಕ್ಷೇತ್ರವಾದಾಗ, ಕಾಂಗ್ರೆಸ್‌ನ ಚಿಕ್ಕಣ್ಣ ಗೆಲುವು ಸಾಧಿಸಿದರು. 2013ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎಸ್.ಚಿಕ್ಕಮಾದು ಕಾಂಗ್ರೆಸ್‌ನ ಚಿಕ್ಕಣ್ಣ ಅವರನ್ನು ಮಣಿಸಿದರು. ಈ ನಡುವೆ ಚಿಕ್ಕಮಾದು ಅವರು ಸಾವನ್ನಪ್ಪಿದರು. 2018ರಲ್ಲಿ ಚಿಕ್ಕಮಾದು ಅವರ ಪುತ್ರ ಅನಿಲ್ ಅವರನ್ನು ಕಾಂಗ್ರೆಸ್‌ನತ್ತ ಕರೆತರಲಾಯಿತು. ಅನಿಲ್ ಚಿಕ್ಕಮಾದು 76,652 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರು.

ಈವರೆಗಿನ ಚುನಾವಣೆಯ ಫಲಿತಾಂಶ ವಿವರ

ಕೃಷ್ಣ ನಾಯಕರ ಪ್ರಭಾವ

ಕಾಂಗ್ರೆಸ್, ಜೆಡಿಎಸ್, ಬಿಜೆಪಿ- ಈ ಮೂರು ಪಕ್ಷಗಳ ಅಭ್ಯರ್ಥಿಗಳು ಹಣಬಲವನ್ನು ಹೊಂದಿದ್ದಾರೆ. ಸದ್ಯಕ್ಕೆ ಕೃಷ್ಣ ನಾಯಕ ಅವರು ಕಮಲವನ್ನು ಅರಳಿಸಬಲ್ಲರೇ ಎಂಬ ಕುತೂಹಲ ಹೆಚ್ಚಿದೆ. ಕಳೆದ ಎಂಟು ವರ್ಷಗಳಿಂದ ಕ್ಷೇತ್ರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಕೃಷ್ಣ ಅವರು ಜೆಡಿಎಸ್‌ನ ಕೈತಪ್ಪಿ ಬಿಜೆಪಿಗೆ ಬಂದಿದ್ದು, ರಾಜಕೀಯ ಪಲ್ಲಟಗಳಿಗೂ ಕಾರಣವಾಗಿದೆ. ಕೃಷ್ಣ ನಾಯಕ ಅವರು ಎಚ್‌.ಡಿ.ದೇವೇಗೌಡರ ಅಪ್ಪಟ ಅಭಿಮಾನಿಯಾಗಿ, ಸರಗೂರು ಮತ್ತು ಎಚ್.ಡಿ.ಕೋಟೆಯಲ್ಲಿ ಅಪ್ಪಾಜಿ ಕ್ಯಾಂಟೀನ್‌ ತೆರೆದು ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡಿದವರು. ಕೋವಿಡ್ ಸಂದರ್ಭದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದರು. ಜೆಡಿಎಸ್‌ ಟಿಕೆಟ್ ಸಿಗುತ್ತದೆ ಎಂದೇ ಭಾವಿಸಿದ್ದರು. ಆದರೆ ಕೊನೆಗಳಿಗೆಯಲ್ಲಿ ಕೈತಪ್ಪಿತು.

ಕೃಷ್ಣಾ ನಾಯಕ್ ಅವರು ಜೆಡಿಎಸ್‌ನಲ್ಲಿ ಇದ್ದಾಗಿನಿಂದಲೂ ಒಂದಿಷ್ಟು ಬೆಂಬಲಿಗರನ್ನು ಹೊಂದಿದ್ದರು. ಅವರೆಲ್ಲರೂ ಈಗ ಬಿಜೆಪಿಗೆ ಬಂದಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಬಿಜೆಪಿಗೆ ಸೇರಿದ ಬಳಿಕ ತಮ್ಮ ಮೂಲ ಬೆಂಬಲಿಗರಿಗೆ ಹೆಚ್ಚಿನ ಆದ್ಯತೆಯನ್ನು ಕೃಷ್ಣ ನೀಡುತ್ತಿದ್ದಾರೆಂಬ ಆಕ್ಷೇಪ ಇದೆ. ಜೆಡಿಎಸ್‌ನ ಸಾಂಪ್ರದಾಯಿಕ ಮತಗಳು ಇದ್ದೇ ಇವೆ.

ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯಕ

ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್ ಅವರಿಗೆ ಸ್ಥಳೀಯ ಜೆಡಿಎಸ್ ಮುಖಂಡರು ಮತ್ತು ಪಕ್ಷದ ವರಿಷ್ಠರು ಒಲವು ತೋರಿದ್ದರಿಂದ ಟಿಕೆಟ್ ದೊರಕಿತು. ಕ್ಷೇತ್ರದಲ್ಲಿ ಜೆಡಿಎಸ್‌ನದ್ದೇ ಆದ ಮತಗಳು ಇದ್ದೇ ಇವೆ.  ಹೀಗಾಗಿ ಈ ಬಾರಿ ಅನಿಲ್‌ ಚಿಕ್ಕಮಾದು ಅವರಿಗೆ ಸವಾಲು ಎದುರಾಗಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಜಾತಿ ಲೆಕ್ಕಾಚಾರವನ್ನು ನೋಡುವುದಾದರೆ ಒಂದೊಂದು ಪಕ್ಷಕ್ಕೆ ಒಂದೊಂದು ಜಾತಿ ಮತಗಳು ಚದುರಿ ಹೋಗುತ್ತವೆ. ಪರಿಶಿಷ್ಟ ಜಾತಿಯ ಮತಗಳು (58,000) ಕ್ಷೇತ್ರದಲ್ಲಿ ಹೆಚ್ಚಿವೆ. ಪರಿಶಿಷ್ಟ ಪಂಗಡ (ನಾಯಕರು ಮತ್ತು ಆದಿವಾಸಿಗಳು ಸೇರಿ)- 41,000, ಲಿಂಗಾಯತರು- 33,000, ಒಕ್ಕಲಿಗರು- 23,000, ಕುರುಬರು- 12,000 ಮತದಾರರು ಇದ್ದಾರೆಂದು ಅಂದಾಜಿಸಲಾಗಿದೆ.

ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್

ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದ ಸಮಾಜ ಸೇವಕ ಬಾಬು ನಾಯಕ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಅವರು ಕಾಂಗ್ರೆಸ್ ಮತಗಳನ್ನು ಕಸಿಯುತ್ತಾರೆಂಬ ಭಯವೇನೂ ಅನಿಲ್ ಅವರಿಗೆ ಇಲ್ಲ. ಆದರೆ ಧ್ರುವನಾರಾಯಣ ಅವರ ಅನುಪಸ್ಥಿತಿ ಅನಿಲ್ ಅವರನ್ನು ಕಾಡಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿರುವ ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಧ್ರುವ ಅವರು ಪ್ರಭಾವ ಹೊಂದಿದ್ದರು. ಸಂಸದರಾಗಿ ಅವರು ಮಾಡಿದ ಕೆಲಸಗಳನ್ನು ಕ್ಷೇತ್ರದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ. ಧ್ರುವ ಅವರಿಂದಾಗಿಯೇ ಅನಿಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತು ಮೊದಲ ಸಲ ಗೆದಿದ್ದರು. ಆದರೆ ಧ್ರುವ ಅವರ ನಿಧನದ ಅನುಕಂಪ ಎಷ್ಟರ ಮಟ್ಟಿಗೆ ಅನಿಲ್ ಅವರಿಗೆ ವರದಾನವಾಗುತ್ತದೆ ಎಂಬುದು ಅಂದಾಜು ಸಿಗುತ್ತಿಲ್ಲ. ಅಂತಿಮವಾಗಿ ತ್ರಿಕೋನ ಸ್ಪರ್ಧೆಯಂತೂ ಕ್ಷೇತ್ರದಲ್ಲಿ ಏರ್ಪಡುವುದು ಖಚಿತ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಹಾಸನ: ಒಕ್ಕಲಿಗರ ಮೇಲಾಟದ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಫೈಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...