Homeಮುಖಪುಟಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

- Advertisement -
- Advertisement -

ತಮ್ಮನ್ನು ಲಕ್ಕಿಡಿಪ್ ಸಿಎಂ ಎಂದು ಕರೆದ, ಅವರ ಕುಟುಂಬ ರಾಜಕಾರಣದ ಕುರಿತ ಆರೋಪ ಮಾಡಿದ ಬಿಜೆಪಿ ಎಂದ ಬಿಜೆಪಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ತಿರುಗೇಟು ನೀಡಿದ್ದಾರೆ.

ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಬಿಜೆಪಿಯ ಬಿಜೆಪಿಯ ಅಪರೇಶನ್ ಕಮಲದ ರಾಜಕಾರಣವನ್ನು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದಾರೆ. ಅವರ ವಂಶವಾಹಿ ರಾಜಕಾರಣದ ಪಟ್ಟಿಯನ್ನು ಈ ಹಿಂದೆ ಕೊಟ್ಟಿದೆ. ಮತ್ತೊಮ್ಮೆ ಕೊಡುತ್ತಿದ್ದೇನೆ ನೋಡಿ ಎಂದು ಧೀರ್ಘ ಪಟ್ಟಿ ಹಾಕಿದ್ದಾರೆ.
1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಕಡಿಮೆಯೇನಿಲ್ಲ

2009 ರಲ್ಲಿ ಶೇ. 30 ರಷ್ಟು ವಂಶಪಾರಂಪರ್ಯದ ಸದಸ್ಯರು ಲೋಕಸಭೆಗೆ ಆಯ್ಕೆಯಾದರೆ 2014 ರಲ್ಲಿ ಶೇ. 22ಕ್ಕೆ ಇಳಿದಿತ್ತು. ಈ ಕುಟುಂಬ ರಾಜಕಾರಣ ಎಂಬುದು ನಿಜಕ್ಕೂ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಮಾರಕ ಅಂಶವಾಗಿದೆ. ಆದರೆ ಕೇವಲ ಕಾಂಗ್ರೆಸ್‌ನಲ್ಲಿ, ಅಥವಾ ಪ್ರಾದೇಶಿಕ ಪಕ್ಷಗಳಲ್ಲಿ ಮಾತ್ರ ವಂಶಾಡಳಿತ ಇದೆ ಎಂದರೆ ತಪ್ಪಾಗುತ್ತದೆ. ಏಕೆಂದರೆ 2014ರಲ್ಲಿ ಬಿಜೆಪಿಯಿಂದ ಶೇ. 44 ರಷ್ಟು ಕುಟುಂಬ ರಾಜಕಾರಣದ ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು ಎಂದು ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ವಿದ್ವಾಂಶ ರೋಮೈನ್ ಕಾರ್ಲೆವಾನ್ ಎಂಬುವವರ ಅಧ್ಯಯನ ತೆರೆದಿಟ್ಟಿದೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿತ್ತು!. ಹಾಗಾಗಿ ಎಲ್ಲಾ ಪಕ್ಷದ ಮತ್ತು ಎಲ್ಲಾ ರೀತಿಯ ಕುಟುಂಬ ರಾಜಕಾರಣವೂ ಸಹ ಖಂಡಿಸಬೇಕು.

ಒಂದೆಡೆ ಮೋದಿಯವರು ಮತ್ತು ಬಿಜೆಪಿ ವಂಶಾಡಳಿತ ರಾಜಕಾರಣವನ್ನು ವಿರೋಧಿಸುತ್ತಾರೆ. ಅದು ಪ್ರಜಾಪ್ರಭುತ್ವಕ್ಕೆ ಮಾರಕ ಎನ್ನುತ್ತಾರೆ. ಆದರೆ ಅವರ ಪಕ್ಷದಲ್ಲಿಯೇ ವಂಶವಾಹಿನಿ ರಾಜಕಾರಣ ಡಾಳಾಗಿ ಎದ್ದು ಕಾಣುತ್ತದೆ. ಅದರ ಬಗ್ಗೆ ಮಾತ್ರ ಅವರು ಮೌನ ವಹಿಸುತ್ತಾರೆ. ಇದು ಅವರ ಇಬ್ಬಂದಿತನವನ್ನು ತೋರಿಸುತ್ತದೆ.

2019ರಲ್ಲಿ ಬಿಜೆಪಿಯು ಲೋಕಸಭೆಯಲ್ಲಿ 303 ಸಂಸದರು ಮತ್ತು ರಾಜ್ಯಸಭೆಯಲ್ಲಿ 85 ಸದಸ್ಯರನ್ನು ಹೊಂದಿತ್ತು. ಎರಡೂ ಸೇರಿ ಒಟ್ಟು 388 ಸಂಸದರಲ್ಲಿ 45 ಸಂಸದರು ವಂಶಾಡಳಿತ ರಾಜಕಾರಣದಿಂದಲೇ ಬಂದಿದ್ದರು. ಅಂದರೆ ಸುಮಾರು ಶೇ. 11 ರಷ್ಟು ಎಂದು ದಿ ಪ್ರಿಂಟ್ ವರದಿ ಮಾಡಿತ್ತು.

ಬಿಜೆಪಿಯ ವಂಶಾಡಳಿತ ರಾಜಕಾರಣದ ಪಟ್ಟಿ ಇಲ್ಲಿದೆ

ಜೆ.ಪಿ ನಡ್ಡಾ

ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಬಸವರಾಜ ಬೊಮ್ಮಾಯಿ

ಕರ್ನಾಟಕದ ಬಿಜೆಪಿ ಆಡಳಿತದಲ್ಲಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ. ಅವರ ತಂದೆ ಸಹ ಹಿಂದೆ ಕರ್ನಾಟಕದಲ್ಲಿ ಸಿಎಂ ಹುದ್ದೆ ಅಲಂಕರಿಸಿದ್ದರು.

ಪೆಮಾ ಖಂಡು

ಹಾಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿರುವ ಇವರ ರಾಜ್ಯದ ಮಾಜಿ ಸಿಎಂ ದೋರ್ಜಿ ಖಂಡುರವರ ಪುತ್ರರಾಗಿದ್ದಾರೆ.

ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರವರ ತಂದೆ ಗಂಗಾಧರ ಪಂತ್ ಫಡ್ನವೀಸ್‌ರವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. ದೇವೇಂದ್ರ ಫಡ್ನವೀಸ್‌ರವರ ಚಿಕ್ಕಮ್ಮ ಶೋಭಾ ಫಡ್ನವಿಸ್ ರಾಜ್ಯ ಸಚಿವರಾಗಿದ್ದರು.

ಸುವೇಂಧು ಅಧಿಕಾರಿ

ಪಶ್ಚಿಮ ಬಂಗಾಳದ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿಯವರ ಆಪ್ತನಾಗಿದ್ದ ಸುವೇಂಧು ಅಧಿಕಾರಿಯನ್ನು ಬಿಜೆಪಿ ಸೆಳೆದುಕೊಂಡಿತು. ಅವರ ತಂದೆ ಶಿಶಿರ್ ಅಧಿಕಾರಿ ಕೇಂದ್ರ ಸಚಿವರಾಗಿದ್ದವರು. ಈಗ ಸುವೇಂಧು ಬಂಗಾಳದ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಮೋದಿ ಕ್ಯಾಬಿನೆಟ್‌ನಲ್ಲಿರುವ ವಂಶಾಡಳಿತದಿಂದ ಬಂದ ಮಂತ್ರಿಗಳು

ಜ್ಯೋತಿರಾಧಿತ್ಯ ಸಿಂಧಿಯಾ

ಈಗ ವಿಮಾನಯಾನ ಸಚಿವರಾಗಿದ್ದಾರೆ. ಅವರ ತಂದೆ ಮಾಧವರಾವ್‌ ಸಿಂಧಿಯಾ ಹಿಂದೆ ಕೇಂದ್ರ ಸಚಿವರಾಗಿದ್ದರು.

ಅನುರಾಗ್ ಠಾಕೂರ್

ಈಗ ಕ್ರೀಡೆ ಮತ್ತು ಯುವಜನರ ಸಬಲೀಕರಣ ಸಚಿವರಾಗಿದ್ದಾರೆ. ಅವರ ತಂದೆ ಪ್ರೇಮ್ ಕುಮಾರ್ ಧುಮಾಲ್ ಹಿಂದೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಪಿಯೂಷ್ ಗೋಯಲ್

ಈಗ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವರು. ಅವರು ಮಾಜಿ ಬಿಜೆಪಿ ರಾಷ್ಟ್ರೀಯ ಖಜಾಂಚಿ ಮತ್ತು ಕೇಂದ್ರ ಸಚಿವ ದಿವಂಗತ ವೇದ್ ಪ್ರಕಾಶ್ ಗೋಯಲ್ ಅವರ ಪುತ್ರ.

ಧರ್ಮೇಂದ್ರ ಪ್ರಧಾನ್

ಸದ್ಯ ಕೇಂದ್ರ ಶಿಕ್ಷಣ ಸಚಿವ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿರುವ ಪ್ರಧಾನ್ ಅವರು ಬಿಜೆಪಿ ನಾಯಕ ದೇಬೇಂದ್ರ ಪ್ರಧಾನ್ ಅವರ ಪುತ್ರರಾಗಿದ್ದಾರೆ. ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದರು.

ಕಿರಣ್ ರಿಜಿಜು

ಇತ್ತೀಚೆಗೆ ಕಾನೂನು ಮತ್ತು ನ್ಯಾಯ ಸಚಿವರಾಗಿರುವ ಇವರು ಅರುಣಾಚಲ ಪ್ರದೇಶದ ಮೊದಲ ಹಂಗಾಮಿ ಸ್ಪೀಕರ್ ಆಗಿದ್ದ ರಿಂಚಿನ್ ಖರು ಅವರ ಪುತ್ರರಾಗಿದ್ದಾರೆ.

ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮಂತ್ರಿಯಾಗಿರುವ ಇವರ ತಂದೆ ಆಂಧ್ರಪ್ರದೇಶದಲ್ಲಿ ಸಚಿವರಾಗಿದ್ದರು. ಇವರ ಅತ್ತೆ ಶಾಸಕಿಯಾಗಿದ್ದರು. ಪತಿ ಪರಕಾಲ ಪ್ರಭಾಕರ್ ಅವರು ಕಾಂಗ್ರೆಸ್‌ನಲ್ಲಿದ್ದರು ಮತ್ತು ಆಂಧ್ರಪ್ರದೇಶದ ನರಸಾಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಫಲರಾದರು.

ಸುಷ್ಮಾ ಸ್ವರಾಜ್

ದೆಹಲಿಯ ಮಾಜಿ ಸಿಎಂ ಆಗಿರುವ ಸುಷ್ಮಾ ಸ್ವರಾಜ್‌ರವರ ಪತಿ ಮಿಜೋರಾಂನ ರಾಜ್ಯಪಾಲರಾಗಿದ್ದರು.

ಬಿಜೆಪಿಯ ವಂಶಾಡಳಿತ ಮುಂದುವರೆಸಿರುವ ಸಂಸತ್ ಸದಸ್ಯರು 

ರವಿಶಂಕರ್ ಪ್ರಸಾದ್ ಮಾಜಿ ಸಚಿವರಾಗಿರುವ ಇವರು, ಕಾಂಗ್ರೆಸ್ ಸಂಸದರಾಗಿದ್ದ ರಾಜೀವ್ ಶುಕ್ಲಾರವರ ಭಾಮೈದ.

ದುಷ್ಯಂತ್ ಸಿಂಗ್ ಸಂಸದರಾಗಿರುವ ಇವರು ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇರವರ ಪುತ್ರ.

ಬಿ.ವೈ. ರಾಘವೇಂದ್ರ: ಸಂಸದರಾಗಿರುವ ಇವರು ಕರ್ನಾಟಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮಗ.

ಮಂಗಳಾ ಅಂಗಡಿ: ಇವರ ಪತಿ ಸುರೇಶ್ ಅಂಗಡಿ ಬೆಳಗಾವಿ ಸಂಸದರಾಗಿದ್ದರು. ಅವರು ಮೃತಪಟ್ಟ ನಂತರ ಸಂಸದರಾಗಿದ್ದಾರೆ.

ರಾಜ್‌ಬೀರ್ ಸಿಂಗ್: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್‌ರವರ ಪುತ್ರ.

ಪ್ರವೇಶ್ ವರ್ಮಾ: ದೆಹಲಿಯ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ.

ಪೂನಂ ಮಹಾಜನ್: ಮಾಜಿ ಕೇಂದ್ರ ಸಚಿವ ಪ್ರಮೋದ್ ಮಹಾಜನ್ ಅವರ ಪುತ್ರಿ.

ಜಯ್ ಶಾ

ಗೃಹ ಸಚಿವ ಅಮಿತ್ ಶಾರವರ ಮಗ ಜಯ್‌ ಶಾ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ.


ಇದನ್ನೂ ಓದಿ: ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...