Homeಕರ್ನಾಟಕಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂಬುದು ಜನರಿಗೆ ಅರ್ಥವಾಗಬೇಕಿದೆ ಎಂದಿದ್ದಾರೆ.

‘ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

’ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು’ ಎಂದು ಹೇಳಿದ್ದಾರೆ.

’ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ’ ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ಸರ್ಕಾರದ ಕ್ರಮಕ್ಕೆ ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರೀಯ ಭಾಷೆಯಾದ ಕನ್ನಡಕ್ಕೆ ಸ್ಥಾನ ನೀಡದಿರುವುದು ನೋವಿನ ಸಂಗತಿ ಎಂದು ಕನ್ನಡಪರ ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದಾ ಹೀನ ಹತ್ಯೆ: ಮಗಳನ್ನೆ ಕೊಂದ ತಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...