Homeಕರ್ನಾಟಕಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ಕನ್ನಡ ಭಾಷೆಯನ್ನು ಕೊಳಕು ಭಾಷೆ ಎಂದು ಅವಹೇಳನಾಕಾರಿ ವಿಷಯ ತೋರಿಸಿದ್ದ ವೆಬ್‌ಸೈಟ್ ಅನ್ನು ಗೂಗಲ್ ಈಗ ತೆಗೆದುಹಾಕಿ ವಿವಾದಕ್ಕೆ ತೆರೆ ಎಲೆಯಲು ಯತ್ನಿಸಿದೆ. ಆದರೆ ಕನ್ನಡದ ರಾಜಕಾರಣಿಗಳು, ಕನ್ನಡಪರ ಹೋರಾಟಗಾರರು, ಕನ್ನಡಿಗರು ಮಾತ್ರ ಮತ್ತೆ ಮತ್ತೆ ಗೂಗಲ್‌ ಅನ್ನು ಪ್ರಶ್ನಿಸುತ್ತಿದ್ದಾರೆ.

ಕನ್ನಡವೊಂದೇ ಅಲ್ಲ ಯಾವ ಭಾಷೆಯೂ ಕುರೂಪವಲ್ಲ, ಭಾಷೆ ವಿಚಾರದಲ್ಲಿ ಅಸೂಕ್ಷ್ಮತೆ ಸರಿಯಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಭಾಷೆ ವಿಚಾರದಲ್ಲಿ Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ..? ಎಂದು ಪ್ರಶ್ನಿಸಿದ್ದಾರೆ.

’ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್‌ಗೆ ಅಸಾಧ್ಯವೇ..? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

’ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರವೇನು..?’ ಎಂದು ಗೂಗಲ್‌ಗೆ ಟ್ಯಾಗ್ ಮಾಡಿದ್ದಾರೆ.

’ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ’ ಎಂದಿದ್ದಾರೆ.

ಜೊತೆಗೆ ಕುವೆಂಪು ಅವರ ’ಇದು ನಿನ್ನ ಭಾಷೆ, ಇದು ದೇಶಭಾಷೆ, ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯಭಾಷೆ, ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿದಾರ್ಶನಿಕರನ್ನೂ ಹಡೆದಿರುವ ಭಾಷೆ’ ಎಂಬ ಸಾಲುಗಳನ್ನು ಬರೆದು ಕನ್ನಡದ ಶ್ರೇಷ್ಠತೆ ತಿಳಿಸಿದ್ದಾರೆ.


ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...