Homeಕರ್ನಾಟಕಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ...

ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ- ಕುಮಾರಸ್ವಾಮಿ

"ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ"

- Advertisement -
- Advertisement -

ಕೊರೊನಾ ಪರಿಸ್ಥಿತಿ ನಿರ್ವಹಣೆ ಮಾಡಲಾಗದೇ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಹೇಳಿದ್ದಾರೆ.

“ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ…ಇವೆಲ್ಲಾ ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವ ಈಶ್ವರಪ್ಪ, ಬಿಜೆಪಿ ರಾಷ್ಟರೀಯ ಕಾರ್ಯದರ್ಶಿ ಸಿಟಿ ರವಿ, ಸಚಿವ ಡಿ.ವಿ.ಸದಾನಂದಗೌಡ ಕೊರೊನಾ ನಿರ್ವಹಣೆ ಕುರಿತು ವಿವಾದಿತ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದರು.

“‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ..? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

“ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ” ಎಂದು ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ಕೊರೊನಾ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

“ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪ್ರಾದೇಶಿಕ ಪಕ್ಷಗಳ ಆಡಳಿತವಿರುವ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ” ಎಂದಿದ್ದಾರೆ.

“ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...