Homeಕರ್ನಾಟಕಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

- Advertisement -
- Advertisement -

ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

“ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ  ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು  ಮಂದಿಗೆ ಮಾತ್ರ ಕೊಟ್ಟು ಉಳಿದವರಿಗೆ ವಂಚಿಸಿದೆ” ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

’ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

 

’ಕೊರೊನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ  ಎಂಬುದು ಭ್ರಮೆ ಅಲ್ಲದೆ ಮತ್ತೇನು..?” ಎಂದು ಪ್ರಶ್ನಿಸಿದ್ದಾರೆ.

’ಕೊರೊನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ.  ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19  ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ” ಎಂದು ರಾಜ್ಯ ಸರ್ಕಾರವನ್ನು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ: ರೈತ ಸಂಘಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...