ರಾಜ್ಯದ ಹಳೇ ಮೈಸೂರು ಭಾಗದ ವಿವಿದೆಡೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

’ಕೆಆರ್‌ಎಸ್‌ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‌ಎಸ್‌ ನೀರುಣಿಸುತ್ತಿದೆ. ಕೆಆರ್‌ಎಸ್‌ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು’ ಎಂದು ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಕ್ರೋಶ ಹೊರ ಹಾಕಿದ್ದಾರೆ.

‘ಕೆಆರ್‌ಎಸ್‌ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್‌ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತವಾಗಿವೆ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

’ಅಕ್ರಮ ಕಲ್ಲು ಗಣಿಗಾರಿಕೆ ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ’ ಎಂದು ಜಗದೀಶ್ ವಿ.ಸದಂ ಆರೋಪಿಸಿದ್ದಾರೆ.

’ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ’ ಎಂದು ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ಹೇಳಿದ್ದಾರೆ.

’ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್‌ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here