Homeಕರ್ನಾಟಕನಮ್ಮ ಪೂಜೆಯ ಎದುರು ಇವರ 'ರಾಮ ಜಪ' ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ:...

ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ: HDK ಕಿಡಿ

ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ- HDK

- Advertisement -
- Advertisement -

“ನಾವು ಮಾಡಿರುವ ಪೂಜೆಗಳ ಕಾಲು ಭಾಗದಷ್ಟೂ ಇವರು ಮಾಡಿಲ್ಲ; ಇವರದು ಧಾರ್ಮಿಕ ಭ್ರಷ್ಟಾಚಾರ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದು, ತಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿರುವವರಿಗೆ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಇದರ ವಿರುದ್ಧ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ ಅನೇಕರು ಟೀಕೆ ಮಾಡಿದ್ದರು.

ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು, ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ. ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!” ಎಂದು ತಮ್ಮ ಕುಟುಂಬದ ದೈವಿಕ ಭಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ ‘ಅಧಿಕಾರ ರಾಮ ಜಪ’ ಕಾಲು ಭಾಗಕ್ಕೂ ಸಾಲದು. ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ. ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ. ಅದರ ಫಲವನ್ನೂ ಉಣ್ಣಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ! ಒಬ್ಬರು ಹೇಳಿದ್ದಾರೆ, ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ, ಅಧಿಕಾರ, ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ, ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ ಎಂದು ಪೇಜಾವರ ಶ್ರೀಗಳ ಹೆಸರು ಹೇಳದೇ ತಿರುಗೇಟು ನೀಡಿದ್ದಾರೆ.

ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ ಎಂದು ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ. ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ, ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ, ರಾಮಮಂದಿರ ಹಿಂದೂಗಳ ಭಕ್ತಿ, ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...