Homeಕರ್ನಾಟಕಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ. ಇದು ಪಕ್ಷಾತೀತವಾದ ಕಾರ್ಯಕ್ರಮ ಎಂದಿರುವ ಕಾಂಗ್ರೆಸ್‌, ಟೀಕೆ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿತ್ತು. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಜನರಿಗೆ ’ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದೆ ಎಂದಿದ್ದಾರೆ.

’ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ’ ಎಂದು ತಮ್ಮ ಸರಣಿ ಟ್ವಿಟ್‌ಗಳಲ್ಲಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ.

’ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಎಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

’ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ; ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ. ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ’ ಎಂದು ಟೀಕಿಸಿದ್ದಾರೆ.

’ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು. ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು..?’ ಎಂದು ಪ್ರಶ್ನಿಸಿದ್ದಾರೆ.

’ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ?. ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ’ ಎಂದಿದ್ದಾರೆ.

’ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ. ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ’ ಎಂದು ಟೀಕಿಸಿದ್ದಾರೆ.

’ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ. ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...