Homeಕರ್ನಾಟಕಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ'

- Advertisement -
- Advertisement -

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಎಂಬ ಪದ ಬಳಸದೆ ಇಂದಿನಿಂದ ಕಠಿಣ ಲಾಕ್‌ಡೌನ್ ಘೋಷಿಸಿದೆ. ಜನ ಸಾಮನ್ಯರಿಗೆ ಪರಿಹಾರ ನೀಡುವ ಬದಲು ರಸ್ತೆಗೆ ಇಳಿಯುವ ಜನರ ಮೇಲೆ ದರ್ಪ ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಲಾಕ್‌ಡೌನ್ ಅಲ್ಲದ ಕಠಿಣ ಲಾಕ್‌ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್‌ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್‌ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್‌ಡೌನ್ ಆಗಿತ್ತು’ ಎಂದಿದ್ದಾರೆ.

’ಲಾಕ್‌ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್‌ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್‌ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಲಾಕ್‌ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ತಮಿಳು ನಾಡಿನಲ್ಲಿ ಕೋಮು ರಾಜಕೀಯಕ್ಕೆ ಸ್ಥಾನವಿಲ್ಲ!: ಸಸಿಕಾಂತ್ ಸೆಂಥಿಲ್

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು,  ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...