Homeಮುಖಪುಟರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ಎಲ್ಲಿಯೂ ನೇರವಾಗಿ ಮಾತನಾಡದ ಕುಮಾರಸ್ವಾಮಿಯವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

- Advertisement -
- Advertisement -

ಎಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಜೆಡಿಎಸ್‌ಗಿಂತ ಬಿಜೆಪಿ ಮುಖಂಡರೇ ಹೆಚ್ಚಿನ ಸಂಖ್ಯೆಯಲ್ಲಿ ಟ್ವೀಟ್ ಮಾಡಿ ಶುಭ ಹಾರೈಸಿದ್ದರು. ಖುದ್ದು ನರೇಂದ್ರ ಮೋದಿಯೇ ಟ್ವೀಟ್ ಮಾಡಿದ್ದರು. ನಂತರ ಜೆಡಿಎಸ್‌ ಪಕ್ಷ ಬಿಜೆಪಿಯಲ್ಲಿ ವಿಲೀನಗೊಳ್ಳುತ್ತದೆ ಎಂಬ ವದಂತಿಗಳು ಹರಡಿದ್ದವು. ಆದರೆ ಅದೆಲ್ಲವನ್ನು ನಯವಾಗಿ ನಿರಾಕರಿಸಿದ್ದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಬಹಿರಂಗವಾಗಿ ನರೇಂದ್ರ ಮೋದಿ ಪರ ಬ್ಯಾಟ್ ಬೀಸಲು ಅಖಾಡಕ್ಕಿಳಿದಿದ್ದಾರೆ.

ಇಂದು ಟ್ವೀಟ್‌ ಮಾಡಿರುವ ಕುಮಾರಸ್ವಾಮಿಯವರು, “ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ” ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದ ಎಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ನಂತರ ನಿಧಾನವಾಗಿ ಅದರಿಂದ ಹಿಂದೆ ಸರಿದಿತ್ತು. ಅಲ್ಲದೆ ಭೂಸುಧಾರಣಾ ತಿದ್ದುಪಡಿಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪರವಾಗಿ ಮತ ಹಾಕಿ ಟೀಕೆಗೆ ಒಳಗಾಗಿತ್ತು. ಈಗ ಸರಣಿ ಟ್ವೀಟ್‌ಗಳಲ್ಲಿ ಕುಮಾರಸ್ವಾಮಿಯವರು ನಯವಾಗಿ ಮೋದಿ ಪರ ನಿಲುವು ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ, ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಮುಂದುವರೆದು ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಎಲ್ಲಿಯೂ ನೇರವಾಗಿ ಮಾತನಾಡದ ಅವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕುಮಾರಸ್ವಾಮಿಯವರ ಈ ನಡೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಈ ಅಭಿಪ್ರಾಯ ಅತ್ಯಂತ ದುರದೃಷ್ಟಕರ. ಈ ಕಾಯಿದೆ ಪರವಾದ ವಕಾಲತ್ತು ರೈತರ ಹಿತಕ್ಕಿಂತ ನಿಮ್ಮ ರಾಜಕೀಯ ಹಿತಾಸಕ್ತಿಯೇ ಮುಖ್ಯ ಎನ್ನುವದನ್ನು ಸಾಬೀತುಪಡಿಸಿದಿರಿ! ನಿಮ್ಮ ಪಕ್ಷದ ಚಿಹ್ನೆಯನ್ನು ಹೊರೆಹೊತ್ತ ರೈತ ಮಹಿಳೆಯಿಂದ ಕಮಲ ಹೊತ್ತ ಅದಾನಿ ಮಾಡಿ! ರಾಜಕೀಯವಾಗಿ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಯಶವಂತ್ ಪಿ.ಎನ್‌ರವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...