Homeಕರ್ನಾಟಕಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

’ಈ ಅನಾಹುತಕ್ಕೆ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ, ದೆಹಲಿಯವರೆಗೂ ತಲುಪಿ ಈಗ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಆಗಮಿಸಿದ್ದಾರೆ. ಆದರೂ ರಾಜ್ಯ ಬಿಜೆಪಿಯಲ್ಲಿ ಪರ-ವಿರೋಧ ಹೇಳಿಕೆಗಳು ಬರುತ್ತಲೇ ಇವೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ಅಧಿಕಾರ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

“ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು” ಎಂದು ಟ್ವೀಟ್ ಮಾಡಿದ್ದಾರೆ.

’ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

’ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ..? ಎಂದು ಪ್ರಶ್ನಿಸಿದ್ದಾರೆ.

’ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

’ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು’ ಎಂದು ಕಿಡಿಕಾರಿದ್ದಾರೆ.

‘ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು..? ಇದೇ ಕಾಂಗ್ರೆಸ್ ಅಲ್ಲವೇ..? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು’ ಎಂದು ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

’ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ..? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’ ಎಂದಿದ್ದಾರೆ.

ಇದರ ಜೊತೆಗೆ “ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ” ಎಂಬ ಬಸವಣ್ಣನವರ ವಚನವನ್ನು ಪೋಸ್ಟ್‌ ಮಾಡಿ, ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ’ ಎಂದು ಎಚ್.ಡಿ.ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...