Homeಕರ್ನಾಟಕದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು - ಎಚ್.ಡಿ.ಕುಮಾರಸ್ವಾಮಿ

ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..?’

- Advertisement -
- Advertisement -

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ವಾ ನಾಗ್ ನಡುವಿನ ಸಂಘರ್ಷ ಬೀದಿಗೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿನ ವಿದ್ಯಮಾನಗಳ ಬಗ್ಗೆ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ’ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ’ ಎಂದಿದ್ದಾರೆ.

’ಈ ಇಬ್ಬರು ಐಎಎಸ್ ಅಧಿಕಾರಿಗಳು ಇಷ್ಟೊಂದು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತ ಸರಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರೂ, ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದಾರೆ..?’ ಎಂದು ಪ್ರಶ್ನಿಸಿದ್ದಾರೆ.

’ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿ ಚಪಲ ತೀರಿಸಿ ಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಹೀಗೆ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ “ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು..?’ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

’ಕೂಡಲೇ ಸರಕಾರ ಇಬ್ಬರೂ ಅಧಿಕಾರಿಗಳ ಬಾಯಿಗೆ ಬೀಗ ಹಾಕುವಂತಹ ಧೈರ್ಯವನ್ನಾದರೂ ತೋರಲಿ. ಇಲ್ಲದಿದ್ದರೆ, ನಾಳೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಮರ್ಯಾದೆ ಹರಾಜಾದರೆ ಅದಕ್ಕೆ ಈಗಿನ ಸರಕಾರವೇ ಕಾರಣವಾಗಲಿದೆ. ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

’ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್‌ ಮ್ಯಾನ್‌ಗಳಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್  12 ಕೋಟಿ ರೂಪಾಯಿಗಿಂತ  ಸಿಎಸ್‌ಆರ್‌ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ’ ಎಂದು ಮೈಸೂರಿನಲ್ಲಿ ನಡೆಯುತ್ತಿರುವ ಆರೋಪ – ಪ್ರತ್ಯಾರೋಪದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ದ ಮಾತನಾಡಿದ್ದಕ್ಕೆ ದಾಖಲಿಸಿದ್ದ ದೇಶದ್ರೋಹ ಪ್ರಕರಣ ಸುಪ್ರೀಂನಿಂದ ರದ್ದು

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‎’ಇದು ಮುಖ್ಯಮಂತ್ರಿಯ ದೌರ್ಬಲ್ಯವೋ..? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ..? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ..? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ..?’ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

‘ಪ್ರಜಾಪ್ರಭುತ್ವದ ಮೂರು ಮಂಗಗಳು’ ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ  ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ’ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...