Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ಮಹಿಳೆಯ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

ರೇವಣ್ಣ ಅವರನ್ನು ಮೇ 5ರಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ 4 ದಿನಗಳ ಎಸ್‌ಐಟಿ ಕಸ್ಟಡಿಗೆ ನೀಡಿತ್ತು. ಇಂದು (ಮೇ 8) ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

“ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ. ಹಾಗಾಗಿ, ಅವರನ್ನು ಎಸ್‌ಐಟಿ ವಶಕ್ಕೆ ನೀಡಬೇಕು ಎಂದು ಎಸ್‌ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಮನವಿ ಮಾಡಿದರು. ಅದಕ್ಕೆ ಒಪ್ಪದ ಕೋರ್ಟ್ ಮೇ 14ರವರೆಗೆ ನ್ಯಾಯಾಂಗ ಬಂಧನ ಕ್ಕೆ ಒಪ್ಪಿಸಿದೆ. ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದರು.

ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮೈಸೂರಿನ ಕೆಆರ್ ನಗರ ಮೂಲದ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ಆಕೆಯ ಮಗ ರಾಜು ಎಂಬಾತ ಕೆಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮೇ 4ರಂದು ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಈ ಬೆನ್ನಲ್ಲೇ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿತ್ತು.

ಇದನ್ನೂ ಓದಿ : ‘ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ’: ವಿಕ್ಟೋರಿಯ ಆಸ್ಪತ್ರೆಯಲ್ಲಿ ವಾರ್ಡ್‌ ಅಟೆಂಡರ್‌ಗಳಿಂದ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...