Homeಕರ್ನಾಟಕವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ

ವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಇತ್ತಿಚೆಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ಪತ್ರಿಕೆಯೊಂದರಲ್ಲಿ ಬಂದಿರುವ ವರದಿಯನ್ನು ಹಂಚಿಕೊಂಡಿರುವ ಅವರು, ಇದು ತೀವ್ರ ಆಘಾತ ನೀಡಿದೆ ಎಂದಿದ್ದಾರೆ.

“ಪತ್ರಿಕೆಯಲ್ಲಿ ಇಂದು ಪ್ರಕಟವಾಗಿರುವ ಈ ವರದಿ ಅತ್ಯಂತ ಕಳವಳಕಾರಿ. ಕರ್ನಾಟಕವೂ ಸೇರಿ ದೇಶಾದ್ಯಂತ 12,500 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಓದಿ ನನಗೆ ತೀವ್ರ ಆಘಾತ ಉಂಟಾಗಿದೆ” ಎಂದಿದ್ದಾರೆ.

“ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಕೆಲ ಶಿಕ್ಷಣಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶಕ್ಕೆ ಶೋಭೆ ತರುವ ವಿಚಾರವಲ್ಲ. ಕೋವಿಡ್ ಮತ್ತಿತರೆ ಸಮಸ್ಯೆಗಳಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಮೃತ್ಯುಪಾಶಕ್ಕೆ ತುತ್ತಾಗಿರುವುದು ನಮ್ಮ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಹದಿಹರೆಯದವರು ವಿದ್ಯಾರ್ಥಿ ID ಬಳಸಿಕೊಂಡು ಕೊರೊನಾ ಲಸಿಕೆಗೆ ನೋಂದಾಯಿಸಬಹುದು: ಸರ್ಕಾರ

“ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಂದ ಕಂಗೆಟ್ಟ  ವಿದ್ಯಾರ್ಥಿಗಳು ಸಕಾಲಕ್ಕೆ ನೆರವು ಸಿಗದೇ ನೊಂದು-ಬೆಂದು ಜೀವವನ್ನು ಕೊನೆ ಮಾಡಿಕೊಳ್ಳುವ ಅಪಾಯಕಾರಿ ನಿರ್ಧಾರಕ್ಕೆ ಬರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ವಿದ್ಯಾರ್ಥಿಗಳ ನೆರವಿಗೆ ತಕ್ಷಣ ಧಾವಿಸಬೇಕು” ಎಂದು ಒತ್ತಾಯಿಸಿದ್ದಾರೆ.

’ಒಂದೆಡೆ ಭಾರತವು ವಿಶ್ವಗುರುವಾಗಬೇಕು ಎನ್ನುವವರು, ಇನ್ನೊಂದೆಡೆ ಉನ್ನತ ಶಿಕ್ಷಣವನ್ನು ಉಳ್ಳವರ ಪಾಲು ಮಾಡುತ್ತಿದ್ದಾರೆ. ಇವತ್ತಿನ ವ್ಯವಸ್ಥೆ ಮತ್ತು ಸರಕಾರಗಳ ನೀತಿಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ. ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ’ ಎಂದು ಶಿಕ್ಷಣ ಕ್ಷೇತ್ರದ ಧನದಾಹದ ಬಗ್ಗೆ ಮಾತನಾಡಿದ್ದಾರೆ.

’ಸಮಸ್ಯೆಗಳಿವೆ ಎಂದು ಜೀವ ತೆಗೆದುಕೊಳ್ಳುವುದು ಬೇಡ. ಅಂತ ತಪ್ಪು ನಿರ್ಧಾರಕ್ಕೆ ಮುನ್ನ ನಿಮಗೆ ಜನ್ಮ ಕೊಟ್ಟವರನ್ನು ಮರೆಯಬಾರದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂಥ ದುಡುಕಿನ ನಿರ್ಧಾರಕ್ಕೆ ಬರಬಾರದ” ಎಂದು ಎಚ್.ಡಿ.ಕುಮಾರಸ್ವಾಮಿ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...