Homeಮುಖಪುಟಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

ಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂಬ  ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಪ್, ಕಾಂಗ್ರೆಸ್ ಮತ್ತು ನಟ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಮಾನ್ಯ ಹೆಚ್.ಡಿ ದೇವೆಗೌಡರು ಎಲ್ಲಾ ಸಮುದಾಯದ ಬಗ್ಗೆ ಅಪಾರ ಗೌರವ ಕಾಳಜಿಯನ್ನು ಹೊಂದಿದ್ದಾರೆ. ಆದರೆ ಹೆಚ್.ಡಿ ಕುಮಾರಸ್ವಾಮಿರವರು ಬ್ರಾಹ್ಮಣ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆಪ್ ಮುಖಂಡರಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಯಾವುದೇ ಜಾತಿಯ ಹೆಸರು ಹಿಡಿದು ಆರೋಪ ಮಾಡುವುದು ಶೋಭೆಯಲ್ಲ. ಎಲ್ಲ ಜಾತಿ ಸಮುದಾಯದಲ್ಲಿಯೂ ಅನೇಕ ಉಪಜಾತಿಗಳಿವೆ. ಜಾತಿ ವಿಷಯದಲ್ಲಿ ರಾಜಕಾರಣ ಸಲ್ಲದು. ಬ್ರಾಹ್ಮಣ ಸಮುದಾಯ ಬಗ್ಗೆ ಮಾತನಾಡಿರುವ ಶಾಪ ಅವರನ್ನು ತಟ್ಟದೆ ಬಿಡದು ಎಂದು ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ನಟ ಚೇತನ್ ಆರೋಪ

“ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ- ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು.
ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ” ಎಂದು ನಟ ಚೇತನ್ ಆರೋಪಿಸಿದ್ದಾರೆ.

ಇನ್ನು ಪ್ರಹ್ಲಾದ್ ಜೋಶಿ ಮತ್ತು ಬ್ರಾಹ್ಮಣರ ಕುರಿತ ತಮ್ಮ ಹೇಳಿಕೆಯನ್ನು ಹೆಚ್.ಡಿ ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. “ಇತಿಹಾಸ ತೆಗೆದುನೋಡಿ. ಶೃಂಗೇರಿಯ ವಿದ್ಯಾರಣ್ಯರು ಕಟ್ಟಿದಂತಹ ಚಂದ್ರಮೌಳೇಶ್ವರ ದೇವಾಲಯದ ಮೇಲೆ ದಾಳಿ ಮಾಡಿ ಒಡೆದು ಹಾಕಿದವರು ಯಾರು? ಅದನ್ನು ಇಲ್ಲಿಯವರೆಗೂ ಅದನ್ನು ಪುನರ್‌ ನಿರ್ಮಿಸದಿರಲು ಕಾರಣವೇನು?  ಶೃಂಗೇರಿಯ ಗುರುಗಳು ಕಟ್ಟಬಹುದಾಗಿತ್ತು. ಅದನ್ನು ಕಟ್ಟದಿರಲು ಕಾರಣವೆಂದರೆ ಇತಿಹಾಸದಲ್ಲಿ ಈ ರೀತಿಯ ದಾಳಿ ನಡೆಸಿರುವುದು ಸಾರ್ವಜನಿಕರಿಗೆ ಗೊತ್ತಾಗಲೆಂದು” ಎಂದು ಹೇಳಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹೆಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದರು. ಭಾನುವಾರ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...