Homeಕರ್ನಾಟಕಜೆಡಿಎಸ್‌ನ 'ಅಡಹಾಕ್ ಅಧ್ಯಕ್ಷ'ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

ಜೆಡಿಎಸ್‌ನ ‘ಅಡಹಾಕ್ ಅಧ್ಯಕ್ಷ’ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

- Advertisement -
- Advertisement -

ಬಿಜೆಪಿಯೊಂದಿಗಿನ ಮೈತ್ರಿಯಿಂದಾಗಿ ಜೆಡಿಎಸ್‌ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಇದೀಗ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ, ಪಕ್ಷದ ಅಡಹಾಕ್ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಹೆಚ್‌ಡಿ ದೇವೇಗೌಡ ಅವರು, ”ಕರ್ನಾಟಕ ಪ್ರದೇಶ ಜನತದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

”ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ ಅಂದರೆ Article XX (10) ಪ್ರಕಾರ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ” ಎಂದು ಆದೇಶ ಹೊರಡಿಸಿದ್ದಾರೆ.

ಮತ್ತೊಂದು ಪ್ರಕಟನೆಯಲ್ಲಿ ”ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷ-ಅಡಹಾಕ್ ಅಧ್ಯಕ್ಷರ ನೇಮಕಾತಿ” ಕುರಿತು ತಿಳಿಸಿದ್ದಾರೆ.

”ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈಗಾಗಲೇ ವಿಸರ್ಜನೆ ಮಾಡಲಾಗಿದೆ. ಮುಂದುವರೆದು, ಪಕ್ಷದ ಕಾರ್ಯಚಟುವಟಿಕೆಗಳನ್ನು ಸುಲಲಿತವಾಗಿ ನಡೆಸಿಕೊಂಡು ಹೋಗಲು ಕರ್ನಾಟಕ ಜನತಾದಳ (ಜಾತ್ಯತೀತ) ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಅಡಹಾಕ್ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನೇಮಿಸಲಾಗಿದೆ” ಎಂದು ಹೆಚ್‌ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಚ್‌ಡಿಕೆ, ನಿಖಿಲ್‌ರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...