Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ಎನ್‌ಐಎ ಹೊಸ ಮೂರು ಎನ್‌ಐಎ ಘಟಕಗಳನ್ನು ಆರಂಭಿಸಿದ್ದು, ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿಲ್ಲ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಳಗಿನ ಕೆಲ ಅಪ್ರಭುದ್ಧರ ಹೇಳಿಕೆ ಪಕ್ಷದ ಹಿರಿಯ ನಾಯಕರಿಗೆ ಅವಮಾನ ಎಂದಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ ಬೆಂಗಳೂರನ್ನು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ ಎಂದು ಹೇಳಿಕೆ ನೀಡಿದವರಿಂದ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ವ್ಯಂಗ್ಯವಾಡಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಇನ್ನೂ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕ ಚಟುವಟಿಕೆಗೆ ಉದಾಹರಣೆ ನೀಡಿದ್ದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಗಳ ಕುರಿತು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ’ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಪ್ರಭುದ್ಧರ ಹೇಳಿಕೆಯಿಂದ ಬೆಂಗಳೂರಿಗೆ ಅವಮಾನ. ಜೊತೆಗೆ ಪಕ್ಷದ ಹಿರಿಯರಿಗೂ ಅವಮಾನ ಎಂದಿದ್ದಾರೆ.

ಇತ್ತ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದೇನೆ. ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ನಿನ್ನೆ ಎನ್‌ಐಎ  ಹೊಸ ಮೂರು ಎನ್‌ಐಎ ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸೂಚನೆ ದೊರೆತಿಲ್ಲ.

ಇಂಫಾಲ್ (ಮಣಿಪುರ), ಚೆನ್ನೈ (ತಮಿಳುನಾಡು) ಮತ್ತು ರಾಂಚಿ (ಜಾರ್ಖಂಡ್)ಯಲ್ಲಿ ಹೊಸ ಮೂರು ಹೆಚ್ಚುವರಿ ಶಾಖೆಗಳನ್ನು ಮಂಜೂರು  ಮಾಡಲು ಗೃಹ ಸಚಿವಾಲಯ (ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಮಂಜೂರು ಮಾಡಿದೆ. ಈ ಮೂರು ಕಡೆ ಮಾತ್ರ ಸದ್ಯ ಎನ್‌ಐಎ ಘಟಕ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪ್ರಸ್ತುತ, ಎನ್ಐಎ ಭಾರತದಾದ್ಯಂತ ಒಂಬತ್ತು ಶಾಖೆಗಳನ್ನು ಹೊಂದಿದೆ. ಅವು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‌ಪುರ ಮತ್ತು ಚಂಡೀಗಡದಲ್ಲಿವೆ, ನವದೆಹಲಿಯಲ್ಲಿ  ವಿಶೇಷ ಘಟಕಗಳಿವೆ. ಬೆಂಗಳೂರಿನಲ್ಲಿ ಎನ್‌ಐಎ ಉಪಶಾಖೆ ಇದ್ದು, ಇದು ಹೈದರಾಬಾದ್ ಎನ್‌ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ತೇಜಸ್ವಿ ಸೂರ್ಯ ಹೇಳಿಕೆಗೆ ನೆಟ್ಟಿಗರು ಮತ್ತು ರಾಜಕೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್ ಮುಖಂಡ ಪ್ರಿಯಾಂಕ್‌ ಖರ್ಗೆ, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ, ತೇಜಸ್ವಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು.


ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...