Homeಕರ್ನಾಟಕತಮ್ಮ ಸರ್ಕಾರವನ್ನೇ ಉರುಳಿಸಿದವರನ್ನು ತಬ್ಬಿಕೊಳ್ಳುವ ದುಃಸ್ಥಿತಿ ಹೆಚ್‌ಡಿಕೆಗೆ ಬಂದಿದೆ: ಡಿಕೆ ಶಿವಕುಮಾರ್

ತಮ್ಮ ಸರ್ಕಾರವನ್ನೇ ಉರುಳಿಸಿದವರನ್ನು ತಬ್ಬಿಕೊಳ್ಳುವ ದುಃಸ್ಥಿತಿ ಹೆಚ್‌ಡಿಕೆಗೆ ಬಂದಿದೆ: ಡಿಕೆ ಶಿವಕುಮಾರ್

- Advertisement -
- Advertisement -

”ತಮ್ದದೇ ಸರ್ಕಾರವನ್ನು ಉರುಳಿಸಿದವರ ಜತೆಯಲ್ಲೇ ಕೂರಿಸಿಕೊಂಡು ಪ್ರತಿಭಟಿಸುವ, ಅವರನ್ನು ತಬ್ಬಿಕೊಳ್ಳುವ ದುಃಸ್ಥಿತಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬಂದಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ ಕ್ರಮದಲ್ಲಿ ಮಾತನಾಡಿದ ಅವರು, ”ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಅದರೆ, ಸರ್ಕಾರ ಉರುಳಿಸಿದವರ ಬಳಿ ಏಕೆ ನೆಂಟಸ್ತಿಕೆ ಮಾಡಬೇಕು? ಎಂಬ ಪ್ರಶ್ನೆ ಜೆಡಿಎಸ್ ಕಾರ್ಯಕರ್ತರಲ್ಲಿದೆ” ಎಂದು ಹೇಳಿದರು.

”ರಾಜ್ಯ ವಿಧಾನಸಭಾ ಚುನಾವಣೆ ಮುಗಿದು 110 ದಿನಗಳು ಕಳೆದರೂ ವಿರೋಧ ಪಕ್ಷದ ನಾಯಕವನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಅನುಕೂಲಸಿಂಧು ರಾಜಕಾರಣ ಮಾಡುತ್ತಿವೆ” ಎಂದು ವಾಗ್ದಾಳಿ ನಡೆಸಿದರು.

ಪಕ್ಷ ಸೇರುವವರಿಗೆ ಸ್ವಾಗತ. ಎಲ್ಲರಿಗೂ ಅವಕಾಶಗಳು ದೊರಕುತ್ತವೆ. ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕು, ಯಾರೂ ಅವಸರ ಮಾಡಬಾರದು. ಕಾಂಗ್ರೆಸ್‌ ಪಕ್ಷ ಸೇರಲು ಬಂದವರನ್ನು ತಡೆದು, ಅಪಡಿಸಲಾಗಿತ್ತು. ಬಿಜೆಪಿಗೆ ಈಗ ಕಾರ್ಯಕರ್ತರು ನೆನಪಾಗುತ್ತಿದ್ದಾರೆ ಎಂದರು.

ಪದ್ಮನಾಭ ನಗರ ಕ್ಷೇತ್ರದ ಹಲವು ಬಿಜೆಪಿ ಹಾಗೂ ಜೆಡಿಎಸ್ ಮಾಜಿ ಕಾರ್ಪೊರೇಟರ್​ಗಳು, ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಲೋಕಸಭೆ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಆಪರೇಷನ್ ಮುಂದುವರೆಸಿದ್ದು, ಮಾಜಿ ಸಚಿವ ಹಾಗೂ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಅಶೋಕ್ ಆಪ್ತರಿಗೆ ಡಿಕೆ ಬ್ರದರ್ಸ್ ಗಾಳ ಹಾಕುವಲ್ಲಿ ಯಶಸ್ವಿ ಆಗಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಮುಖಂಡರಾದ ಮಾಜಿ ಉಪಮೇಯರ್ ಎಲ್ ಶ್ರೀನಿವಾಸ್, ಪಾಲಿಕೆ ಮಾಜಿ ಸದಸ್ಯರಾದ ಶೋಭಾ ಅಂಜಿನಪ್ಪ, ಎಚ್ ನಾರಾಯಣ್, ಎಚ್ ಸುರೇಶ್, ವೆಂಕಟಸ್ವಾಮಿ ನಾಯ್ಡು, ಎಲ್ ಗೋವಿಂದರಾಜು, ಬಾಲಕೃಷ್ಣ, ಸುಗುಣ ಬಾಲಕೃಷ್ಣ, ನರಸಿಂಹ ನಾಯಕ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಂಜಿನಪ್ಪ, ಜೆಡಿಎಸ್ ಮುಖಂಡ ಪ್ರಸಾದ್ ಬಾಬು (ಕಬಡ್ಡಿ ಬಾಬು) ಚಿತ್ರ ನಟ ರವಿಕಿರಣ್, ಅಕ್ಬರ್ ಅಲಿಖಾನ್ ಮತ್ತಿತರ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...