Homeಕರ್ನಾಟಕಎಫ್‌ಐಆರ್ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಹೆಚ್‌ಡಿಕೆ, ನಿಖಿಲ್

ಎಫ್‌ಐಆರ್ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಹೆಚ್‌ಡಿಕೆ, ನಿಖಿಲ್

- Advertisement -
- Advertisement -

ಲೋಕಾಯುಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ನೀಡಿರುವ ದೂರು ಆಧರಿಸಿ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ಶಾಸಕ ಸುರೇಶ್ ಬಾಬು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕುಮಾರಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಿದೆ.

ತಮ್ಮ ರಾಜಕೀಯ ಎದುರಾಳಿಗಳ ಪ್ರಚೋದನೆಗೆ ಒಳಗಾಗಿ ಚಂದ್ರಶೇಖರ್‌ ಅವರು ನಮ್ಮ ವಿರುದ್ದ ಆರೋಪ ಮಾಡಿ, ಘನತೆಗೆ ಹಾನಿ ಮಾಡಿದ್ದಾರೆ. ಹಲವು ರಾಜಕೀಯ ವಿರೋಧಿಗಳು ಚಂದ್ರಶೇಖರ್‌ ಅವರನ್ನು ಪ್ರಚೋದಿಸಿದ್ದು, ಅವರು ಬರೆದಿರುವ ಪತ್ರವನ್ನು ಪೊಲೀಸ್‌ ಇಲಾಖೆಯಲ್ಲಿ ಹಂಚಿಕೆ ಮಾಡಲಾಗಿದೆ. ಈಗ ದೂರಿನಲ್ಲಿ ಮಾಡಿರುವ ಆರೋಪಗಳು ಸೃಷ್ಟಿತವಾಗಿದ್ದು, ಎಫ್‌ಐಆರ್‌ ದಾಖಲಿಸುವ ಉದ್ದೇಶದಿಂದ ಮಾಡಲಾಗಿದೆ. ಹೀಗಾಗಿ, ಅದನ್ನು ವಜಾ ಮಾಡಬೇಕು ಎಂದು ಕುಮಾರಸ್ವಾಮಿ ಮತ್ತು ಇತರರು ಕೋರಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಕುಮಾರಸ್ವಾಮಿ ನನ್ನ ವಿರುದ್ದ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ. ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ, ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ ಎಂದು ಚಂದ್ರಶೇಖರ್ ದೂರು ನೀಡಿದ್ದರು.

ದೂರು ಆಧರಿಸಿ ಎನ್‌ಸಿಆರ್ ದಾಖಲಿಸಿಕೊಂಡಿದ್ದ ಬೆಂಗಳೂರಿನ ಸಂಜಯ್‌ ನಗರ ಠಾಣೆ ಪೊಲೀಸರು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ಆಧರಿಸಿ, ನಿನ್ನೆ(ನ.5) ಕುಮಾರಸ್ವಾಮಿ, ನಿಖಿಲ್‌ ಮತ್ತು ಸುರೇಶ್‌ ಬಾಬು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 224 (ಸರ್ಕಾರಿ ಅಧಿಕಾರಿಗೆ ಬೆದರಿಕೆ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ | ಮುಡಾ ಪ್ರಕರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...